ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಸುದ್ದಿಒನ್, ಚಿತ್ರದುರ್ಗ, (ನ.06) : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಾಸವರಹಟ್ಟಿ ಗ್ರಾಮದಲ್ಲಿ ಕಾಲುಬಾಯಿ ಜ್ವರ ರೋಗದ ವಿರುದ್ದ ರಾಸುಗಳಿಗೆ ಲಸಿಕೆ ನೀಡಲಾಯಿತು.
ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೇಣುಗೋಪಾಲ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ರೈತರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೆ ಕಾಲುಬಾಯಿ ರೋಗದ ವಿರುದ್ದ ಲಸಿಕೆ ಹಾಕಿಸಿಕೊಂಡು ರೈತ ಸಂಪತ್ತಾಗಿರುವ ರಾಸುಗಳನ್ನು ರಕ್ಷಣೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ತಿಪ್ಪೇಸ್ವಾಮಿ, ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ಪಶುವೈದ್ಯಾಧಿಕಾರಿ ಕಾವ್ಯ ವೈದ್ಯಕೀಯ ಪರೀಕ್ಷಕ ಚಿದಾನಂದರೆಡ್ಡಿ ಲಸಿಕಾ ಕಾರ್ಯಕ್ರಮದಲ್ಲಿದ್ದರು.