ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಚಿಕ್ಕಬೆನ್ನೂರು ಗ್ರಾಮದ ರಿ.ಸ.ನಂ. 69 ರ ಸರ್ಕಾರಿ ಗೋಮಾಳವನ್ನು ರಕ್ಷಿಸುವಂತೆ ಭರಮಸಾಗರ ಹೋಬಳಿ ಚಿಕ್ಕಬೆನ್ನೂರು ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಚಿಕ್ಕಬೆನ್ನೂರು ಗ್ರಾಮದ ಎಲ್ಲಾ ಜನಾಂಗದವರ ಹಸು, ಎಮ್ಮೆ, ಕುರಿ, ಮೇಕೆ ಇವುಗಳು ಮೇಯಲು ಜಾಗವಿಲ್ಲದ ಕಾರಣ 2012-13 ರಲ್ಲಿ ಅಂದಿನ ತಹಶೀಲ್ದಾರ್ ಕಾಂತರಾಜ್ ಗೋಮಾಳ ಜಮೀನು ಒತ್ತುವರಿಯಾಗಿರುವುದನ್ನು ತೆರವುಗೊಳಿಸಿ ಜಾನುವಾರುಗಳ ಮೇವಿಗೆ ಅವಕಾಶ ಮಾಡಿಕೊಟ್ಟಿದ್ದರು. ಕೆಲವು ಪ್ರಭಾವಿಗಳು ಈಗ ಗೋಮಾಳ ಜಮೀನಿನಲ್ಲಿ ಉಳುಮೆ ಮಾಡುವ ಹುನ್ನಾರ ನಡೆಸುತ್ತಿರುವುದರಿಂದ ಕಾನೂನು ರೀತಿ ಕ್ರಮ ಕೈಗೊಂಡು ಗೋಮಾಳಕ್ಕೆ ಸೇರಿದ 49 ಎಕರೆ ಹದಿನೆಂಟು ಗುಂಟೆ ಜಮೀನನ್ನು ರಕ್ಷಿಸುವಂತೆ ಚಿಕ್ಕಬೆನ್ನೂರು ಗ್ರಾಮಸ್ಥರು ಒತ್ತಾಯಿಸಿದರು.
ರೈತ ಮುಖಂಡರುಗಳಾದ ಬಸ್ತಿಹಳ್ಳಿ ಸುರೇಶ್‍ಬಾಬು, ಧನಂಜಯ ಹಂಪಯ್ಯನಮಾಳಿಗೆ, ನಿಂಗಪ್ಪ, ಕರಿಯಪ್ಪ, ಆರ್.ನಾಗರಾಜ್, ದೇವರಾಜ್, ಚನ್ನಬಸಪ್ಪ, ವಿ.ಕಲ್ಪನಾ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















