Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಿಡ-ಮರಗಳ ರಕ್ಷಣೆ ಮುಂದಿನ ಪೀಳಿಗೆಗೆ ನಾವು ನೀಡುವ ದೊಡ್ಡ ಕೊಡುಗೆ: ಡಾ. ಶೀತಲ್ ಪ್ರಶಾಂತ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. 12 : ತುರುವನೂರಿನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗಣೇಕಲ್ ಸಹೋದರರ ನೆನಪಿಗಾಗಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಡಾ.ಶೀತಲ್ ಪ್ರಶಾಂತ ಗಿಡ ನೆಟ್ಟು ಮಾತನಾಡುತ್ತ ಇಡೀ ಸಕಲ ಜೀವ ರಾಶಿಗಳಿಗೆ ಗಿಡ ಮರಗಳು ನೀಡುತ್ತಿರುವ ಕೊಡುವ ಅನನ್ಯವಾದುದು. ಮಾನವನ ದುರಾಸೆಗೆ ಗಿಡ ಮರಗಳು ನಾಶವಾಗುತ್ತಿದ್ದು, ಬಿಸಿಲಿನ ತಾಪಮಾನ ಜಾಸ್ತಿಯಾಗತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ ದೊಡ್ಡ ಮರವನ್ನಾಗಿ ಬೆಳೆಸಿದರೆ ಪರಿಸರಕ್ಕೆ ನೀಡುವ ಅದುವೆ ಬಹುದೊಡ್ಡ ಕೊಡುಗೆ ಎಂದು ಹೇಳಿದರು.

ಶ್ರೀ ರಾಮಲಿಂಗೇಶ್ವರ ಕಲ್ಯಾಣ ಮಂಟಪದ ಅಧ್ಯಕ್ಷ ಜಿ.ಚಿದಾನಂದಪ್ಪ ಮಾತನಾಡಿ ಮಾನವನ ಉಸಿರಾಟಕ್ಕೆ ಶುದ್ದ ಆಮ್ಲಜನಕವನ್ನು ನೀಡುವ ಗಿಡ-ಮರಗಳನ್ನು ಕಡಿಯದಂತೆ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸಬೇಕಾಗಿರುವುದರಿಂದ ಎಲ್ಲೆಲ್ಲಿ ಖಾಲಿ ಜಾಗವಿದೆಯೋ ಅಲ್ಲೆಲ್ಲಾ ಗಿಡಗಳನ್ನು ನೆಟ್ಟು ನೀರುಣಿಸಿ ಪೋಷಿಸಬೇಕೆಂದು ಜನತೆಯಲ್ಲಿ ಮನವಿ ಮಾಡಿದರು.

 

ತುರುವನೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೃಷ್ಣಪ್ಪ ಬಿ, ಉಪ ಪ್ರಾಚಾರ್ಯರಾದ ಕಿರಣ್ ಮಜಾಯ್ ಬಂಡಿಗಡ್, ಉಪನ್ಯಾಸಕರುಗಳಾದ ಕೃಷ್ಣಮೂರ್ತಿ ಸಿ, ಓಬಳೇಶ್ ಎಂ.ಪಿ, ನಾಗೇಂದ್ರ ಚೌದರಿ, ವಿಜ್ಞಾನ ಶಿಕ್ಷಕ ರಾಜೇಶ್ ಎಲ್.ಎಂ, ವಿವೇಕಾನಂದಪ್ಪ, ಎಂ.ತಿಪ್ಪೇಸ್ವಾಮಿ, ಟಿ.ವಿ.ದಿನೇಶ್‍ಕುಮಾರ್ ಎಲ್.ವಿ.ಉಮೇಶ್ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now