Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೈಕ್ಷಣೆಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಕಟ್ಟಡ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.26 : ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕಾರ್ಮಿಕ ನಿರೀಕ್ಷಕರ ಕಚೇರಿ ಎದುರು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

2022-23 ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಇದುವರೆವಿಗೂ ಸಹಾಯಧನ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಸಿ.ಕೆ.ಗೌಸ್‍ಪೀರ್ ಮಾತನಾಡಿ ಶೈಕ್ಷಣಿಕ ಧನ ಸಹಾಯವನ್ನು ಕೂಡಲೆ ಬಿಡುಗಡೆಗೊಳಿಸಬೇಕು. 2021-22 ನೇ ಸಾಲಿನಲ್ಲಿ 1.5 ಲಕ್ಷ ಫಲಾನುಭವಿಗಳಿಗೆ ಬಾಕಿ ಉಳಿಸಿಕೊಂಡಿರುವ ಶೈಕ್ಷಣಿಕ ಧನ ಸಹಾಯವನ್ನು ತುರ್ತಾಗಿ ನೀಡಬೇಕು. ಇಪ್ಪತ್ತೈದು ಸಾವಿರ ರೂ. ಬೆಲೆ ಬಾಳುವ ಲ್ಯಾಪ್‍ಟಾಪನ್ನು 75 ಸಾವಿರ ರೂ.ಗಳಿಗೆ ಖರೀಧಿಸಿ ಅವ್ಯವಹಾರ ಎಸಗಿರುವುದನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು. ಹಿಂದಿನ ಬಿ.ಜೆ.ಪಿ.ಸರ್ಕಾರದಲ್ಲಿ ಖರೀದಿಯಲ್ಲಾಗಿರುವ ಅಕ್ರಮವನ್ನು ತನಿಖೆಗೆ ಆದೇಶಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮದುವೆ, ಪಿಂಚಣಿ, ವೈದ್ಯಕೀಯ ಸೌಲಭ್ಯಗಳಿಗೆ ಸಲ್ಲಿಸಿರುವ ನೂರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಪುರಸ್ಕರಿಸಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಸಿ.ನಾಗರಾಜಚಾರಿ, ಖಜಾಂಚಿ ಉಮೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಣ್ಣಮ್ಮ, ತಾಲ್ಲೂಕು ಸಹ ಕಾರ್ಯದರ್ಶಿ ಧರ್ಮಣ್ಣ, ಜಿಲ್ಲಾ ಸಹ ಕಾರ್ಯದರ್ಶಿ ಭಾಸ್ಕರಾಚಾರಿ, ಅಬ್ದುಲ್ಲಾ, ಜಿಕ್ರಿಯ, ರಾಘವೇಂದ್ರ, ಇಸ್ಮಾಯಿಲ್, ಕಂಪಳಪ್ಪ, ರಂಗಸ್ವಾಮಿ, ಮಲ್ಲಿಕಾರ್ಜುನ್, ದ್ರಾಕ್ಷಾಯಣಮ್ಮ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment