Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಂದ್ರಬಾಬು ನಾಯ್ಡು ಬೆಂಬಲಿಗರಿಂದ ಪ್ರತಿಭಟನೆ : ತಿರುಪತಿಯಲ್ಲಿ ಟೈರ್ ಗೆ ಬೆಂಕಿ

---Advertisement---

 

ವಿಜಯವಾಡ: ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರಣೆ ನಡೆಸಿದ ಹೈಕೋರ್ಟ್ ಬಂಧನಕ್ಕೆ ಅನುಮತಿ ನೀಡಿದ ಬೆನ್ನಲ್ಲೇ, ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಇದೀಗ ಚಂದ್ರಬಾಬು ನಾಯ್ಡು ಬೆಂಬಲಿಗರು ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಿರುಪತಿಯಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಚಂದ್ರಬಾಬು ಪುತ್ರ ಕೂಡ ಭಾಗಿಯಾಗಿದ್ದಾರೆ.

ನಾಯ್ಡು ಅವರ ಬಂಧನ ಮಾಡಲು ಹೋದಾಗಲೂ ಬೆಂಬಲಿಗರಿಂದ ಗಲಾಟೆ ಆಗಿತ್ತು. ಮಾತುನ ಚಕಮಕಿಯಾಗಿತ್ತು. ಇಂದು ಮುಂಜಾನೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಅದರ ಜೊತೆಗೆ ಕೆಲವು‌ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಸ್ಕಿಲ್ ಡೆವಲಪ್ಮೆಂಟ್ ನಲ್ಲಿ ಹಗರಣ ಆಗಿದೆ ಎಂಬುದು ಆರೋಪ ಬಂದ ಮೇಲೆ ಈ ಕೇಸನ್ನು ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಎ1 ಆರೋಪಿಯಾಗಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿರುವ ಪೊಲೀಸರು ಸದ್ಯ ಅವರನ್ನು ವಿಜಯವಾಡಕ್ಕೆ ಶಿಫ್ಟ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...