Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿಯಲ್ಲಿ ವಿದ್ಯಾರ್ಥಿ ಮೇಲೆ ಶಿಕ್ಷಕನ ಹಲ್ಲೆ ಖಂಡಿಸಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 21 : ತಾಲೂಕಿನ ನಾಯಕನಹಟ್ಟಿಯ ವೇಧಾಧ್ಯಯನ ಶಾಲೆಯಲ್ಲಿ ರಾಂಪುರ ಮೂಲದ ವಿಧ್ಯಾರ್ಥಿ ತರುಣ್ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಅಮಾನವೀಯ ಹಲ್ಲೆ ಮಾಡಿದ್ದಾನೆ.

 

ಪೋಷಕರಿಗೆ ಯಾಕೆ ಫೋನ್ ಮಾಡಿದೆ ಎಂದು ಪ್ರಶ್ನಿಸಿ ನೆಲಕ್ಕೆ ಬೀಳಿಸಿ ಕಾಲಲ್ಲಿ ತುಳಿದು ಜಾಡಿಸಿ ಹೊಡೆದು ಹಲ್ಲೆ ಮಾಡಿದ್ದಾನೆ. ಬಾಲಕ ಕೈ ಮುಗಿದು ಹೊಡಿಬೇಡಿ ಎಂದು ಬೇಡಿಕೊಂಡರೂ ಬಿಡದೆ ಮನಸೋ ಇಚ್ಚೆ ಥಳಿಸಿ ಕ್ರೌರ್ಯ ಮೆರೆದಿದ್ದಾನೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಈಗ ವೈರಲ್ ಆಗಿದೆ. ಈ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸಾರ್ವಜನಕರು ಶಾಲೆ, ಆಡಳಿತ ಮಂಡಳಿ ವಿರುದ್ದ ಅಸಮಧಾನ ಹೊರ ಹಾಕಿದ್ದಾರೆ. ಹಲ್ಲೆ ಮಾಡಿದ್ದ ಶಿಕ್ಷಕನ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳನ್ನ ತರಾಟೆಗೆ ತಗೆದುಕೊಂಡರು.

 

ಬಳಿಕ ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ತಹಶಿಲ್ದಾರ್ ಪಾಷಾ, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ಮಾಡಿದರು. ಅಲ್ಲದೇ ಹಲ್ಲೆ ನಡೆಸಿದ್ದ ಶಿಕ್ಷಕನನ್ನು ಸಸ್ಪಂಡ್ ಮಾಡುವ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೇ ಹಲ್ಲೆ ಮಾಡಿದ ಬಳಿಕ ಬಾಲಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ತೆರಳುತ್ತಿದ್ದನ್ನ ನೋಡಿ ಆಟೋ ಡ್ರೈವರ್ ರಕ್ಷಣೆ ಮಾಡಿದ್ರು ಎನ್ನಲಾಗಿದೆ. ಆದರೂ ಶಿಕ್ಷಕನ ಮೇಲೆ ಕ್ರಮ ಕೈಗೊಳ್ಳದೆ, ದೂರು ದಾಖಲಿಸಿದ ಆಡಳಿತಾಧಿಕಾರಿಗಳು ಸುಮ್ಮನಿದ್ದ ಬಗ್ಗೆ ಸಾರ್ವಜನಿಕರು ಕಿಡಿ ಕಾರಿದ್ದಾರೆ. ಉಳಿದ ಮಕ್ಕಳ ಪೊಷಕರು ಶಿಕ್ಷಕನ ಕ್ರೌರ್ಯಕ್ಕೆ ಆಕ್ರೋಶ ಹೊರ ಹಾಕಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now