Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಣೇಶ ಹಬ್ಬದಲ್ಲಿ ಡಿಜೆ ಬಳಸಲು ಅನುಮತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಗಣೇಶ ಹಬ್ಬದಲ್ಲಿ ನಾಲ್ಕು ಬಾಕ್ಸ್ ಗಳನ್ನು ಬಳಸಲು ಅನುಮತಿ ನೀಡುವಂತೆ ಜಿಲ್ಲಾ ಷಾಮಿಯಾನ ಡೆಕೋರೇಷನ್ ಧ್ವನಿ ಮತ್ತು ದೀಪಾಲಂಕಾರ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಪ್ರಭಾರ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ಮಾಲೀಕರು ಲಕ್ಷಾಂತರ ರೂ.ಗಳ ಬಂಡವಾಳ ಹೂಡಿ ಡಿಜೆ ಖರೀದಿಸಿರುತ್ತಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಗಣೇಶನ ಹಬ್ಬಕ್ಕೆ ನಾಲ್ಕು ಬಾಕ್ಸ್‌ ಗಳನ್ನು ಬಳಸಲು ಅನುಮತಿ ಕೊಡಬೇಕು. ಇಲ್ಲದಿದ್ದರೆ ನಮ್ಮ ಬದುಕು ಕಷ್ಟವಾಗುತ್ತದೆಂದು ಷಾಮಿಯಾನ ಡೆಕೊರೇಷನ್ ಧ್ವನಿ ಮತ್ತು ದೀಪಾಲಂಕಾರ ಮಾಲೀಕರು ತಮ್ಮ ಅಳಲು ತೋಡಿಕೊಂಡರು.

ಸಂಘದ ಅಧ್ಯಕ್ಷ ಈ.ಗಂಗಾಧರ, ಉಪಾಧ್ಯಕ್ಷ ವಿ.ರಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಎನ್.ತಿಪ್ಪೇಸ್ವಾಮಿ, ಕಾರ್ಯದರ್ಶಿ ಎಜಾಜ್ ಅಹಮದ್, ಖಜಾಂಚಿ ಸಣ್ಣತಿಮ್ಮಪ್ಪ,  ಸಂತೋಷ್, ರಾಮಚಂದ್ರಪ್ಪ, ಸಿದ್ದಲಿಂಗೇಶ್ವರಸ್ವಾಮಿ, ಪರಶುರಾಮಪ್ಪ, ತಿಪ್ಪೆಸ್ವಾಮಿ ಎನ್.ಟಿ. ರಾಮಮೂರ್ತಿ, ಡಿ.ರಾಜು, ಶಿವಪ್ರಕಾಶ್, ಶ್ರೀನಿವಾಸ್, ಪರಮೇಶ್, ಶಶಿಧರ್, ಮನೋಹರ್, ಫಯಾಜ್, ಚಿದಾನಂದಮೂರ್ತಿ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...