Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳಗಾವಿಯಲ್ಲಿ ಲಾಠಿ ಪ್ರಹಾರ ವಿರೋಧಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ :

ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 13 : ಪಂಚಮಸಾಲಿ ಸಮುದಾಯಕ್ಕೆ 2 ಎ.ಮೀಸಲಾತಿ ನೀಡುವಂತೆ ಬೆಳಗಾವಿಯ ಸುವರ್ಣ ಸೌಧದ ಎದುರು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಪಂಚಮಸಾಲಿ ಸಮಾಜ ಹಾಗೂ ವೀರಶೈವ ಲಿಂಗಾಯಿತ ಒಳ ಪಂಗಡಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಲಿಂಗಾಯಿತ ವಿರೋಧಿ ರಾಜ್ಯದ ಮುಖ್ಯಮಂತ್ರಿಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2 ಎ.ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತಿರುವವರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳನ್ನು ಕೂಡಲೆ ಸೇವೆಯಿಂದ ಅಮಾನತ್ತುಗೊಳಿಸಬೇಕು. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಸರ್ಕಾರ ನಮ್ಮ ಚಳುವಳಿಯನ್ನು ಹತ್ತಿಕ್ಕಲು ಅವಕಾಶ ಕೊಡುವುದಿಲ್ಲ. ಪ್ರತಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪೊಲೀಸರ ನಡೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದೆಂದು ಸರ್ಕಾರಕ್ಕೆ ಎಚ್ಚರಿಸಿದರು.

 

ಎಸ್.ಟಿ.ನವೀನ್‍ಕುಮಾರ್, ಪಿ.ಎಂ.ಸಿದ್ದಪ್ಪ, ರುದ್ರೇಶ್ ಐಗಳ್, ಎಂ.ಶಶಿಧರ್‍ಬಾಬು, ಜಿ.ಸಿ.ತಿಪ್ಪಣ್ಣ, ಮಹಂತೇಶ್, ಎಸ್.ಪರಮೇಶ್, ಹೆಚ್.ಎಂ.ಮಂಜುನಾಥ್ ದಾಳಿಂಬೆ, ಕಾರ್ತಿಕ್, ತಿಪ್ಪೇಸ್ವಾಮಿ, ಜಾಲಿಕಟ್ಟೆ ರುದ್ರಣ್ಣ, ಶಿವಾನಂದ್, ಪ್ರವೀಣ್, ನಿರ್ಮಲ ಬಸವರಾಜ್, ರೀನ ವೀರಭದ್ರಪ್ಪ, ಶಿವಪ್ರಕಾಶ್, ಮನು ತಮಟಕಲ್ಲು, ಶಿವರಾಜ್, ಉಮಾ ರಮೇಶ್, ಶೈಲಾ ಕಲ್ಲೇಶ್, ಶ್ರೀದೇವಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...