ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಕೋವೇರಹಟ್ಟಿಯ ಯುವತಿ 19 ವರ್ಷದ ವರ್ಷಿತಾಳನ್ನು ಹತ್ಯೆಗೈದಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಆ. 29 ರಂದು ಗಾಂಧಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ನಾಗರೆಡ್ಡಿ ಬೇಡರೆಡ್ಡಿಹಳ್ಳಿ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾನತಾಡಿದ ಅವರು ಹಾಸ್ಟೆಲ್‍ನಲ್ಲಿದ್ದ ವಿದ್ಯಾರ್ಥಿನಿಯನ್ನು ಕರೆದೊಯ್ದು ಗೋನೂರು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದು ಸುಟ್ಟುಹಾಕಿರುವುದನ್ನು ನೋಡಿದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ತೀವ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಶಿಕ್ಷೆಗೆ ಗುರುಪಡಿಸುವಂತೆ ಒತ್ತಾಯಿಸಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮ ಮಾತನಾಡಿ ವರ್ಷಿತಾಳ ಹತ್ಯೆಯಿಂದ ಹೆಣ್ಣು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳಿಸಲು ಪೋಷಕರು ಭಯಪಡುವಂತ ವಾತಾವರಣ ಸೃಷ್ಟಿಯಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದರೆ ಕಾಮುಕನಿಗೆ ತಕ್ಷೆ ಶಿಕ್ಷೆಯಾಗಬೇಕೆಂದು ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಆ.29 ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮಹಿಳೆಯರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಧಾನ ಕಾರ್ಯದರ್ಶಿ ನೀಲಕಂಠಸ್ವಾಮಿ, ಹನುಮಂತಮ್ಮ, ಮಂಜುಳ ಹೆಚ್. ಮಮತ, ಮಹೇಶ್ ಆರ್.ನಗರಂಗೆರೆ, ಹಿರಿಯೂರು ತಾಲ್ಲೂಕು ಅಧ್ಯಕ್ಷ ವಿನಯ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

