Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರ್ಷಿತಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಆಗಸ್ಟ್ 29 ರಂದು ಪ್ರತಿಭಟನಾ ಮೆರವಣಿಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 26 : ಕೋವೇರಹಟ್ಟಿಯ ಯುವತಿ 19 ವರ್ಷದ ವರ್ಷಿತಾಳನ್ನು ಹತ್ಯೆಗೈದಿರುವವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಆ. 29 ರಂದು ಗಾಂಧಿ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಲಾಗುವುದೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ನಾಗರೆಡ್ಡಿ ಬೇಡರೆಡ್ಡಿಹಳ್ಳಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾನತಾಡಿದ ಅವರು ಹಾಸ್ಟೆಲ್‍ನಲ್ಲಿದ್ದ ವಿದ್ಯಾರ್ಥಿನಿಯನ್ನು ಕರೆದೊಯ್ದು ಗೋನೂರು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದು ಸುಟ್ಟುಹಾಕಿರುವುದನ್ನು ನೋಡಿದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ತೀವ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಶಿಕ್ಷೆಗೆ ಗುರುಪಡಿಸುವಂತೆ ಒತ್ತಾಯಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮ ಮಾತನಾಡಿ ವರ್ಷಿತಾಳ ಹತ್ಯೆಯಿಂದ ಹೆಣ್ಣು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳಿಸಲು ಪೋಷಕರು ಭಯಪಡುವಂತ ವಾತಾವರಣ ಸೃಷ್ಟಿಯಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದೆಂದರೆ ಕಾಮುಕನಿಗೆ ತಕ್ಷೆ ಶಿಕ್ಷೆಯಾಗಬೇಕೆಂದು ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ ಆ.29 ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮಹಿಳೆಯರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಧಾನ ಕಾರ್ಯದರ್ಶಿ ನೀಲಕಂಠಸ್ವಾಮಿ, ಹನುಮಂತಮ್ಮ, ಮಂಜುಳ ಹೆಚ್. ಮಮತ, ಮಹೇಶ್ ಆರ್.ನಗರಂಗೆರೆ, ಹಿರಿಯೂರು ತಾಲ್ಲೂಕು ಅಧ್ಯಕ್ಷ ವಿನಯ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...