Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿ ಸೆ.1 ರಂದು ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಮಧ್ಯ ಕರ್ನಾಟಕ ಬಯಲುಸೀಮೆ ಚಿತ್ರದುರ್ಗ ಜಿಲ್ಲೆಗೆ ಸಮಗ್ರ ನೀರಾವರಿಗೆ ಆಗ್ರಹಿಸಿ ಸೆ.1 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯತನ ಹಿರಿಯೂರಿನ ವಾಣಿವಿಲಾಸ ಸಾಗರ ಬಳಿ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿಯಿಂದ ಕಪ್ಪು ಪಟ್ಟಿ ಧರಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್‍ಹೂಗಾರ್ ತಿಳಿಸಿದ್ದಾರೆ.

ರೈತ ಮುಖಂಡ ಈಚಘಟ್ಟದ ಸಿದ್ದವೀರಪ್ಪ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯವರು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವರು. ವಿದ್ಯಾರ್ಥಿಗಳು, ಯುವಜನರು, ರೈತ ಮಹಿಳೆಯರು, ಪ್ರಗತಿಪರ ಚಿಂತಕರು, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಚಳ್ಳಕೆರೆ ಭಾಗದ ರೈತರು ಹಾಗೂ ಸಮಾನ ಮನಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಧರಣಿ ಸತ್ಯಾಗ್ರಹವನ್ನು ಯಶಸ್ವಿಗೊಳಿಸುವಂತೆ ಬಯಲು ಸೀಮೆ ನೀರಾವರಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಲಕ್ಷ್ಮಣ್ ಹೂಗಾರ್ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now