Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತಿಥಿ ಉಪನ್ಯಾಸಕರುಗಳ ಬೇಡಿಕೆ ಈಡೇರುವ ತನಕ ಧರಣಿ : ಡಾ.ಯಶೋಧರ್ ಜಿ.ಎನ್.

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.24 : ಸೇವೆ ಖಾಯಂಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಆರಂಭಿಸಿರುವ ಅನಿರ್ಧಿಷ್ಟಾವಧಿ ಧರಣಿ ಶುಕ್ರವಾರ 2 ನೇ ದಿನಕ್ಕೆ ಮುಂದುವರೆಯಿತು.

ಅತಿಥಿ ಉಪನ್ಯಾಸಕರುಗಳ ಸಂಘದ ಅಧ್ಯಕ್ಷ ಡಾ.ಯಶೋಧರ್ ಜಿ.ಎನ್. ಧರಣಿಯನ್ನುದ್ದೇಶಿಸಿ ಮಾತನಾಡುತ್ತ ಸರ್ಕಾರ ಎಲ್ಲಿಯವರೆಗೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವುದಿಲ್ಲವೋ ಅಲ್ಲಿಯತನಕ ಧರಣಿ ಮುಂದುವರೆಸುತ್ತೇವೆ. ಒಂದು ವೇಳೆ ನಮ್ಮ ಸೇವೆ ಖಾಯಂಗೊಳಿಸುವ ಭರವಸೆ ನೀಡದಿದ್ದರೆ ಡಿ.4 ರಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನಕ್ಕೆ ತೆರಳಿ ರಾಜ್ಯದ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಹೇಳಿದರು.

ಅತಿಥಿ ಉಪನ್ಯಾಸಕರುಗಳಾದ ಚಂದನ, ಮಂಜುನಾಥ್ ವಿ.ಎಸ್. ಶಿವಪ್ರಕಾಶ್, ಮೊಹಿದ್ದೀನ್‍ಖಾನ್, ಡಾ.ಗುರುಸ್ವಾಮಿ, ಡಾ.ಜಗದೀಶ್ ಕೆರೆನಹಳ್ಳಿ, ಸುವರ್ಣಮ್ಮ, ಡಾ.ನಂದಿನಿ ಟಿ. ಇನ್ನು ಅನೇಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...