Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆಯನ್ನು ಒದಗಿಸಿ : ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ

---Advertisement---

 

ಚಿತ್ರದುರ್ಗ. ಸೆ.30: ಜಿಲ್ಲೆಯ ಗ್ರಾಮೀಣ ಭಾಗದ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ಹಾಗೂ ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ವೈದ್ಯಾಧಿಕಾರಿಗಳು ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಸೂಚಿಸಿದ್ದಾರೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಅವರು ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಬೆಳಿಗ್ಗೆ 9 ರಿಂದ ಸಂಜೆ 4:30 ರವರೆಗೆ ಆಸ್ಪತ್ರೆಯಲ್ಲಿದ್ದು ಹೊರ ರೋಗಿಗಳ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕು. ಕಡ್ಡಾಯವಾಗಿ ಆರೋಗ್ಯ ಸುರಕ್ಷಣಾಧಿಕಾರಿಗಳು, ನಿರೀಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತೆಯರ ಪ್ರಗತಿ ಪರಿಶೀಲನೆಯನ್ನು ಮಧ್ಯಾಹ್ನ ನಂತರ ನೆಡಸಬೇಕು.

ಖಾಯಂ ವೈದ್ಯಾಧಿಕಾರಿಗಳು ಮಾತ್ರ ಕರ್ತವ್ಯ ನಿರ್ವಹಿಸುತ್ತಿರುವ ಆಸ್ಪತ್ರೆ ಹಾಗೂ ಪ್ರಭಾರಿ ಆಸ್ಪತ್ರೆ ವ್ಯಾಪ್ತಿಯಲ್ಲಿನ ಶಾಲಾ, ಅಂಗನವಾಡಿ ಹಾಗೂ ಇತರ ನಿಯಮಿತ ಕ್ಷೇತ್ರಭೇಟಿ ಕಾರ್ಯಗಳನ್ನು ಕೈಗೊಳ್ಳಬೇಕು. ಗುತ್ತಿಗೆ ವೈದ್ಯರು ಡಿ.ಹೆಚ್.ಓ ಅಥವಾ ಟಿ.ಹೆಚ್.ಓ ಅವರ ನಿರ್ದೇಶನದ ಮೇರೆಗೆ ತುರ್ತು ಸಂದರ್ಭದಲ್ಲಿ ಮಾತ್ರ ಕ್ಷೇತ್ರ ಭೇಟಿ ಮಾಡಬೇಕು.

ತುರ್ತು ಸಂದರ್ಭ ಹೊರತು ಪಡಿಸಿ ವೈದ್ಯಾಧಿಕಾರಿಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪರಿಶೀಲನೆಗಳನ್ನು ಮಧ್ಯಾಹ್ನದ ನಂತರ ವಿಡಿಯೋ ಸಂದರ್ಶನದ ಮೂಲವೇ ನಡೆಸಬೇಕು. ವೈದ್ಯರನ್ನು ಭೌತಿಕವಾಗಿ ಕರೆದು ಸಭೆ ನಡೆಸುವ ಅವಶ್ಯಕತೆ ಇಲ್ಲ. ಚಾಚು ತಪ್ಪದೇ ನೀಡಿರುವ ಸೂಚನೆಗಳನ್ನು ಪಾಲಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿ.ಪಂ.ಸಿಇಓ ಡಾ.ಆಕಾಶ್ ಎಚ್ಚರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...