ವೈದ್ಯಕೀಯ ಕಾಲೇಜಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ,ಸರ್ಕಾರಿ ವಿಜ್ಞಾನ ಕಾಲೇಜು ಉಳಿಸಿ : ವಿದ್ಯಾರ್ಥಿಗಳ ಪ್ರತಿಭಟನೆ

suddionenews
2 Min Read

ಚಿತ್ರದುರ್ಗ,ಸುದ್ದಿಒನ್, (ಜೂ.16) :  ಪ್ರತಿಷ್ಠಿತ ಸರ್ಕಾರಿ ವಿಜ್ಞಾನ ಕಾಲೇಜಿನ ಕಟ್ಟಡವನ್ನು, ಅದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಉಳಿಸುವಂತೆ ಒತ್ತಾಯಿಸಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಛೇರಿ ಎದುರು AIDSO ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ವಿಜ್ಞಾನ ಕಾಲೇಜಿನ ಕಟ್ಟಡವನ್ನು, ಅದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಉಳಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಈ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ರಾಜ್ಯ ಕಾರ್ಯಕಾರಿ ಸದಸ್ಯರು ಕೆ.ಈರಣ್ಣ ಮಾತನಾಡಿ… ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಮಾಡುವ ಪ್ರಕ್ರಿಯೆ ಎಲ್ಲಾ ಸರ್ಕಾರಗಳ ಆದ್ಯ ಕರ್ತವ್ಯವಾಗಿದೆ. ಶಿಕ್ಷಣ ಕಲಿಯಲು ಅದರದೇ ಆದ ಎಲ್ಲಾ ರೀತಿಯ ಮಾಹಿತಿಗಳ ಸಂಗ್ರಹವಾಗಿದೆ, ಅದರ ಜೊತೆಗೆ ಕೂಲಂಕುಷವಾಗಿರುವ ಜ್ಞಾನ ಭಂಡಾರ ದೊರೆಯುವಂತೆ ಆಗಬೇಕು. ಕಳೆದ ರಾಜ್ಯ ಬಜೆಟ್ನಲ್ಲಿ ನಮ್ಮ ಚಿತ್ರದುರ್ಗ ಜಿಲ್ಲೆಗೆ ಒಂದು ವೈದ್ಯಕೀಯ ಹಾಗೂ ಕೇಂದ್ರಿಯ ವಿದ್ಯಾಲಯ ಬಂದಿರುವುದು ಅತ್ಯಂತ ಹೆಚ್ಚು ವಿದ್ಯಾರ್ಥಿಗಳಿಗೆ ಸಂತೋಷವಾಗಿದೆ ಮತ್ತು ಎಐಡಿಎಸ್ಓ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ.

ಆದರೆ ಈ ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿರುವ ಚಿತ್ರದುರ್ಗದ ಪ್ರತಿಷ್ಠಿತ ಸರ್ಕಾರಿ ವಿಜ್ಞಾನ ಕಾಲೇಜು ಎಂದು ಹೆಸರು ಪಡೆದಿರುವ ಕಾಲೇಜಿನ ಕಟ್ಟಡದಲ್ಲಿಯೇ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಕೆಲ ಪತ್ರಿಕೆಗಳಲ್ಲಿ ಪ್ರಕಟವಾಗಿವೆ ಹಾಗೂ ಇದರ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಈಗಾಗಲೇ ಈ ಕಾಲೇಜಿನಲ್ಲಿ ಕೆಲವು ಮೂಲಭೂತ ಸಮಸ್ಯೆಗಳು ಇದ್ದು, ಕಾಲೇಜಿನ ಕೆಲವು ಕಟ್ಟಡಗಳು ಕೇಂದ್ರೀಯ ವಿದ್ಯಾಲಯಕ್ಕೆ ಬಾಡಿಗೆ ಕೊಠಡಿ ನಿಡಲಾಗಿದೆ ಎಂದು ತಿಳಿದು ಬಂದಿದೆ.

ಇಂತಹ ಸಂದರ್ಭದಲ್ಲಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಿಗೆ, ಕೇಂದ್ರಿಯ ವಿದ್ಯಾಲಯದ ಮಕ್ಕಳಿಗೆ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದೇ ಕಾಲೇಜಿನಲ್ಲಿ ಯಾವ ರೀತಿಯ ಶಿಕ್ಷಣ ದೊರೆಯುತ್ತದೆ ಎಂದು ವಿದ್ಯಾರ್ಥಿಗಳು ಆತಂಕ ಹಾಗೂ ಯಾವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗುತ್ತದೆ ಎಂಬ ಪ್ರಶ್ನೆ ಎಲ್ಲರಿಗೂ ಕಾಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಿತಾದೃಷ್ಟಿಯಿಂದ ಸರ್ಕಾರಿ ವಿಜ್ಞಾನ ಕಾಲೇಜಿನ ಕಟ್ಟಡವನ್ನು ಅದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಉಳಿಸಬೇಕೆಂದು ಹೇಳಿದರು.

ವಿವಿಧ ಬೇಡಿಕೆಗಳು :
ಸರ್ಕಾರಿ ವಿಜ್ಞಾನ ಕಾಲೇಜಿನ ಕಟ್ಟಡವನ್ನು, ಅದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಉಳಿಸಿ!.

ವೈದ್ಯಕೀಯ ಕಾಲೇಜಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ.

ಸರ್ಕಾರಿ ವಿಜ್ಞಾನ ಕಾಲೇಜಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ನೀಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಐಡಿಎಸ್ಓ ಸದಸ್ಯರು ನಾಗರಾಜ್, ಕುಮಾರ್ ಮತ್ತು ವಿದ್ಯಾರ್ಥಿಗಳಾದ ಮಂಜು, ಜೈದಿಪ್, ವಿವೇಕ್, ಅಭಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *