Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ : ಎ‌ಬಿವಿಪಿ ಆಗ್ರಹ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 04 : ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆಯನ್ನು ನಡೆಸಿ ಜಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಮರ್ಪಕ ಬೋಧಕ ವರ್ಗವಿಲ್ಲದೆ ವಿದ್ಯಾರ್ಥಿಗಳ ಪಾಲಿಗೆ ಮೌಲ್ಯಯುತ ಶಿಕ್ಷಣವೆಂಬುದು ಮಸುಕಾಗಿದೆ. ರಾಜ್ಯದಲ್ಲಿನ 460 ಕ್ಕೂ ಹೆಚ್ಚಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ವ್ಯಾಪಕ ಕೊರತೆ ಇರುವುದು, ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಸಮರ್ಪಕ ತರಗತಿ ನಡೆಯದಿರುವುದು ಕಳೆದ ಹಲವಾರು ವರ್ಷಗಳಿಂದ ಇರುವ ಗಂಭೀರ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಕಾಯಂ ಉಪನ್ಯಾಸಕರ ಬದಲು ಸರ್ಕಾರ ಪ್ರತಿ ವಷ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿ ಸಮಾಧಾನ ಪಟ್ಟಿಕೊಳ್ಳುತ್ತಿತ್ತು. ಆದರೆ ಅತಿಥಿ ಉಪನ್ಯಾಸಕರ ನೇಮಕದಲ್ಲಿಯೂ ಕೂಡ ವಿಳಂಬ ನೀತಿ ಅನುಸರಿಸುವುದು ನಡೆದು ಬಂದಂತಹ ಪ್ರತಿತಿಯಂತೆ ಇತ್ತೀಚೆಗೆ ನೇಮಕಾತಿ ಆದೇಶ ಹೊರ ಬಿದ್ದಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಯೂ ಕೂಡ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ತರಗತಿಗಳು ಶುರುವಾಗಿ 50 ದಿನಗಳು ಕಳೆದ ನಂತರ ನೇಮಕಾತಿ ಮಾಡಿರುವುದು ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಂತಿದೆ. ರಾಜ್ಯದ ವಿದ್ಯಾರ್ಥಿಗಳ ಸಮಯ ಹಾಗೂ ತರಗತಿಗಳ ನಷ್ಟಕ್ಕೆ ಹೊಣೆಯಾರು? ಆದ್ದರಿಂದ ಸರ್ಕಾರ ಕಾಯಂ ಉಪನ್ಯಾಸಕರ ನೇಮಕಾತಿಗೆ ಆದ್ಯತೆ ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.

UUಅಒS ತಂತ್ರಾಂಶದ ಬಳಕೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾಲಯಗಳ ನಡುವೆ ಸಮನ್ವಯದ ಜೊತೆಗೆತಾಂತ್ರಿಕ ಪರಿಣಿತರಕೊರತೆಯಿಂದಾಗಿತಂತ್ರಾಂಶದ ಸುಲಭ ಬಳಕೆ ಅಸಾಧ್ಯವಾಗಿದೆ ಆದ್ದರಿಂದ ಅಧಿಕಾರಿಗಳು ಸಮಜಾಯಿಷಿ ನೀಡಿ ಹೊಣೆಗಾರಿಕೆಯಿಂದ ನುಣಚಿಕೊಳ್ಳದೆ ಜವಾಬ್ದಾರಿಯುತವಾಗಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಬೇಕಿದೆ. ಪದವಿ ಹಾಗೂ ಸ್ನಾತಕೋತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವ ವಿಚಾರದ ಕುರಿತಾಗಿ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಸ್ಪಷ್ಟ ನಿಲುವಿನ ತೆಗೆದುಕೊಳ್ಳಬೇಕೆಂದು ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುವ ಇನ್ನಿತರ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬೇಕು. ಅದರೊಂದಿಗೆ ಖಾಯಂ ಉಪನ್ಯಾಸಕರ ನೇಮಕಾತಿಗೆ ಅತಿ ಹೆಚ್ಚಿನಆದ್ಯತೆ ನೀಡಿ ಸರ್ಕಾರಿ ಕಾಲೇಜುಗಳಲ್ಲಿನ ಮೌಲ್ಯಯುತ ಶಿಕ್ಷಣದ ಕೊರತೆಯನ್ನು ನೀಗಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನವನ್ನು ಮಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿನ ಸವಾಂಗೀಣ ಅಭಿವೃದ್ಧಿಗೆತನ್ನ ಬದ್ಧತೆಯನ್ನು ಖಚಿತಪಡಿಸಬೇಕು.

ಕರ್ನಾಟಕದ ಸಾಂಪ್ರದಾಯಿಕ ಪದವಿ ನೀಡುವ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸಕg ಕೊರv ಅಷೆ ಅಲ್ಲದೆ ಅನುದಾನ ಸಮಸ್ಯೆ, ಮೂಲಭೂತ ಸೌಕರ್ಯಗಳ ಸಮಸ್ಯೆ ,ಪೀಠೋಪಕರಣಗಳ ಕೊರತೆ, ಪ್ರಾಯೋಗಿಕ ಉಪಕರಣಗಳ ಕೊರತೆ ಹೀಗೆ ಸಾಲು ಸಾಲು ಸಮಸ್ಯೆಗಳು ಇವೆ, ಒಂದು ವೇಳೆ ಸರ್ಕಾರ ಈ ಸಮಸ್ಯೆಗಳ ಗಂಭೀರತೆಯನ್ನು ಪರಿಗಣಿಸದೆ ಹೋದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯಾದ್ಯಂತ ತೀವ್ರ ಹೋರಾಟವನ್ನು ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ನೀಡುತ್ತದೆ.

ಈ ಸಂದರ್ಭದಲ್ಲಿ ವಿಭಾಗ ಸಹ ಸಂಚಾಲಕರಾದ ಗೋಪಿ, ನಗರ ಸಹ ಕಾರ್ಯದರ್ಶಿ ಸಂಜಯ್, ಅಧ್ಯಯನ ವೃತ್ತ ಪ್ರಮುಖ್ ರಾಜು ಹೊನ್ನಮರಡಿ, ಎಸ್‌ಎಫ್‌ಎಸ್ ಪ್ರಮುಖ್ ಮಧು, ಸಾಮಾಜಿಕ ಜಾಲತಾಣ ಪ್ರಮುಖ್ ಆದರ್ಶ್, ಕಾರ್ಯಕರ್ತರಾದ ಪ್ರೀತಮ್, ಮಣಿಕಂಠ, ಚರಣ, ಚಂದ್ರಕಲಾ, ಕಾರ್ತಿಕ್, ಚಿತ್ರಸ್ವಾಮಿ ಇನ್ನು ಮುಂತಾದ ಕಾರ್ಯಕರ್ತರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!