ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಚಿತ್ರದುರ್ಗ,(ಜೂ.28) : ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಬೇಕು.
ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಟ್ಟಿರುವ ಹಾಗೆ ಮುಂದಿನ ಯೋಜನೆಗಳಲ್ಲಿ, ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ನಗರದಲ್ಲಿಂದು ಪ್ರತಿಭಟನೆಯನ್ನು ನಡೆಸಿದ ಎಬಿವಿಪಿ ಸಂಘಟನೆಯ ಕಾರ್ಯಕರ್ತರು, ಇದೇ ಜೂನ್ ತಿಂಗಳಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗಬೇಕಾಗುತ್ತಿದೆ. ವಿದ್ಯಾರ್ಥಿಗಳು – ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ.
ಏಕೆಂದರೆ ಕರ್ನಾಟಕದಲ್ಲಿ ನೂತನ ಸರ್ಕಾರವು “ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಾಗಿ ಶಾಲಾ- ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ತಮ್ಮ ಸಮಸ್ಯೆಯನ್ನು ತಿಳಿಸಿದರು.
ಇದರಿಂದಾಗಿ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಹೋಗುವ ಪರಿಸ್ಥಿತಿ ಎಷ್ಟು ಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೂ ಅಷ್ಟು ಸಂಖ್ಯೆಯಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಇದರಿರಿದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಡೆದುಕೊಂಡು ನಿರ್ಮಾಣವಾಗಿದೆ. ಈ ಬಸ್ಸಿನ ಸಮಸ್ಯೆಯಿಂದಾಗಿ ಕಳೆದ ದಿನಗಳ ಹಿಂದೆ ಹಾವೇರಿಯಲ್ಲಿ ವಿದ್ಯಾರ್ಥಿನಿಗೆ ಬಸ್ಸನ್ನು ಹತ್ತಲು ಹೋದಾಗ ಅನಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದರು.
ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಕೊಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು.
ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಟ್ಟಿರುವ ಹಾಗೆ ಮುಂದಿನ ಯೋಜನೆಗಳಲ್ಲಿ, ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ಸಿನ ಪ್ರಯಾಣವನ್ನು ಒದಗಿಸಿಕೊಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಈ ಪ್ರತಿಭಟನೆಯ ನೇತೃತ್ವವನ್ನು ನಗರ ಕಾರ್ಯದರ್ಶಿ ಗೋಪಿ. ಸಹ ಕಾರ್ಯದರ್ಶಿ ಭಾರ್ಗವ, ಹಾಸ್ಟಲ್ ಪ್ರಮುಖ್ ಮನೋಜ್, ತಾಲ್ಲೂಕು ಪ್ರಮುಖ್ ಕನಕರಾಜ್, ಚಿತ್ರ ಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.