ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 17 : ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.
ವಿಶ್ವಕರ್ಮ ಸಮಾಜದ ಮಾಜಿ ತಾಲ್ಲೂಕು ಅಧ್ಯಕ್ಷ ಸಿ. ನಾರಾಯಣಾಚಾರ್ ಪ್ರಾಸ್ತಾವಿಕವಾಗಿ ಮಾತನಾಡಿ ವಿಶ್ವಕರ್ಮ ಸಮಾಜ ದೇಶಕ್ಕೆ ಪಂಚ ಕಸಬುಗಳ ಮೂಲಕ ವಿಶೇಷವಾದ ಕೊಡುಗೆಯನ್ನು ನೀಡಿದೆ. ದೇಶದಲ್ಲಿ ಸುಮಾರು ಏಳು ಕೋಟಿಗೂ ಹೆಚ್ಚು ವಿಶ್ವಕರ್ಮ ಜನಸಂಖ್ಯೆಯಿದ್ದು, ಈ ಸಮುದಾಯವು ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಅನ್ಯಾಯಕ್ಕೆ ಒಳಪಟ್ಟಿದೆ ಎಂದರು.
ತಹಶೀಲ್ದಾರ್ ಎಂ ಸಿದ್ದೇಶ್ ಮಾತನಾಡಿ ನಾಡಿನ ಇತಿಹಾಸವನ್ನು ಕಟ್ಟಿ ಕೊಡುವಲ್ಲಿ ಪ್ರಾಚೀನ ಸ್ಮಾರಕಗಳು ಮತ್ತು ದೇವಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಸ್ಮಾರಕ ಮತ್ತು ದೇವಾಲಯಗಳನ್ನು ನಿರ್ಮಿಸಿರುವ ನಮ್ಮ ಪೂರ್ವಿಕರ ಶ್ರಮ ಮತ್ತು ಸೃಜನಾತ್ಮಕ ಕಲೆ ಇಂದಿನ ಯುವ ಪೀಳಿಗೆಗೆ ಮಾದರಿ. ಶಿಲ್ಪಕಲೆಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ರಾಜ್ಯ ಸರ್ಕಾರವು ವಿಶ್ವಕರ್ಮರ ಕೊಡುಗೆಯನ್ನು ಪರಿಗಣಿಸಿ 2016ರಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯನ್ನು ಜಾರಿಗೆ ತಂದಿತು. ಇಂದಿನ ಆಧುನಿಕ ಎಂಜಿನಿಯರುಗಳು ಅಸಾಧ್ಯವೆನ್ನುವ ಅನೇಕ ರೀತಿಯ ಕಲೆಯನ್ನು ಬಹಳ ಹಿಂದೆಯೇ ನಮ್ಮ ವಿಶ್ವಕರ್ಮರು ವಿಶ್ವಕ್ಕೆ ಪರಿಚಿಯಿಸಿದರು ಎಂದು ತಿಳಿಸಿದರು.

ನಗರಸಭೆ ಅಧ್ಯಕ್ಷ ಆರ್ ಬಾಲಕೃಷ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಸತ್ಯನಾರಾಯಣಚಾರ್, ಪ್ರಭಾಕರ್ ಚಾರ್, ಗುರುಮೂರ್ತಿ ಚಾರ್, ಮಂಜುನಾಥ ಚಾರ್, ಮಲ್ಲೇಶ್ ಚಾರ್, ಗೋಪಾಲಚಾರ್, ರಾಘವೇಂದ್ರ, ಶಶಿಧರ್, ಸುರೇಶ್, ಈಶ್ವರಪ್ಪ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್