Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕ್ರಿಕೆಟ್ ಮೇಲಿರುವ ವ್ಯಾಮೋಹ ರೈತರ ಮೇಲಿಲ್ಲ, ಹೀಗೆ ಮುಂದುವರಿದರೆ ರೈತರ ಪಾಡೇನು ? : ಚಿತ್ರದುರ್ಗದಲ್ಲಿ ಬೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.18  : ರೈತರ ನೀರಾವರಿ ಪಂಪ್‍ಸೆಟ್‍ಗಳಿಗೆ ನಿರಂತರವಾಗಿ ಏಳು ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಬೆಸ್ಕಾಂ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಹೊರಟ ಮೆರವಣಿಗೆಯಲ್ಲಿ ಕೆಲವು ರೈತರು ತಲೆ ಮೇಲೆ ರೊಟ್ಟಿ ಬುತ್ತಿ ಹೊತ್ತುಕೊಂಡು ನಮಗೆ ಏಳು ಗಂಟೆಗಳ ಕರೆಂಟ್ ಕೊಡಿ ಸರ್ಕಾರಕ್ಕೆ ರೊಟ್ಟಿ ಬುತ್ತಿ ಕೊಡುತ್ತೇವೆಂದು ಚೇಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ನೀರಾವರಿ ಪಂಪ್‍ಸೆಟ್‍ಗಳಿಗೆ ದಿನಕ್ಕೆ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ನೀಡುವುದಾಗಿ ಭರವಸೆ ಕೊಟ್ಟಿದ್ದ ಸರ್ಕಾರ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ವಿದ್ಯುತ್‍ನ್ನು ನಿಲುಗಡೆಗೊಳಿಸುತ್ತಿರುವುದರಿಂದ ಕೃಷಿಗಾಗಿ ಸಾಲ ಮಾಡಿ ಬಂಡವಾಳ ಹಾಕಿರುವ ರೈತ ವಿಷ ಕುಡಿಯುವ ಹಂತಕ್ಕೆ ತಲುಪಿದ್ದಾನೆ. ಹಾಸನ ಜಿಲ್ಲೆಯಲ್ಲಿ ದಿನಕ್ಕೆ ಒಂಬತ್ತು ಗಂಟೆಗಳ ಕಾಲ ರೈತರಿಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅಲ್ಲಿ ಹೇಗೆ ಸಾಧ್ಯ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು?

ವಿಧಾನಸಭೆ ಚುನಾವಣಾ ಪೂರ್ವದಲ್ಲಿಯೇ ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷ ಘೋಷಿಸಿದ ಐದು ಗ್ಯಾರೆಂಟಿಗಳಿಗೆ ಹಣ ಒದಗಿಸಲು ಆಗುತ್ತಿಲ್ಲ. ಖಜಾನೆ ದಿವಾಳಿಯಾಗಿದೆ. ರೈತರಿಗೆ ನೀಡಿರುವ ಸಬ್ಸಿಡಿ ಚೆಕ್‍ಗಳು ವಾಪಸ್ ಹೋಗುತ್ತಿವೆ. ಸಂಜೆ ಆರರಿಂದ ಹತ್ತು ಗಂಟೆಯವರೆಗೆ ವಿದ್ಯುತ್ ತೆಗೆಯುತ್ತಿದ್ದಾರೆ. ಸಾವಿರಾರು ಕುಟುಂಬಗಳು ಬೆಳೆಯನ್ನು ರಕ್ಷಿಸಿಕೊಳ್ಳಲು ಹೊಲಗಳಲ್ಲಿಯೇ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಅಂತಹವ ಪಾಡೇನು? ಎನ್ನುವ ಜ್ಞಾನವೂ ಸರ್ಕಾರಕ್ಕಿಲ್ಲದಂತಾಗಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಕ್ರಿಕೆಟ್ ಮೇಲಿರುವ ವ್ಯಾಮೋಹ ರೈತರ ಮೇಲೆ ಇಲ್ಲದಂತಾಗಿದೆ. ಕರೆಂಟ್ ತೆಗೆಯುತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ರೈತರು ಚಳುವಳಿಯಲ್ಲಿ ತೊಡಗಿರುವುದರಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಯ ಹುಟ್ಟಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ರೈತರು ಕಾಂಗ್ರೆಸ್ ವಿರುದ್ದ ಮತಚಲಾಯಿಸಲಿದ್ದಾರೆಂಬುದು ಅರಿವಾಗಿ ಬೆಸ್ಕಾಂ ಎಂ.ಡಿ.ಯವರಿಗೆ ರೈತರ ಹಾಗೂ ಜಿಲ್ಲಾಧಿಕಾರಿ ಜೊತೆ ಸಭೆ ನಡೆಸುವಂತೆ ಸೂಚಿಸಿದ್ದಾರೆ. ರೈತರು ತಮ್ಮ ಬದುಕಿಗಾಗಿ ಹೋರಾಟ ಚುರುಕುಗೊಳಿಸಬೇಕೆಂದು ಮನವಿ ಮಾಡಿದರು.

ರೈತ ಮುಖಂಡರುಗಳಾದ ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿರುದ್ರಸ್ವಾಮಿ, ಬಿ.ಓ.ಶಿವಕುಮಾರ್, ಎಂ.ಲಕ್ಷ್ಮಿಕಾಂತ್, ಓ.ಪಿ.ಟಿ.ಸ್ವಾಮಿ, ಸಿ.ನಾಗರಾಜು ಮುದ್ದಾಪುರ, ಕೃಷ್ಣಪ್ಪ, ರವಿ ಕೋಗುಂಡೆ, ಕೆ.ಸಿ.ಹೊರಕೇರಪ್ಪ, ಧನಂಜಯ ಹಂಪಯ್ಯನಮಾಳಿಗೆ, ಕೆ.ಕುಮಾರಸ್ವಾಮಿ, ಎಲ್.ಮಲ್ಲಿಕಾರ್ಜುನ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment