Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸಿ : ಸಿಎಂಗೆ ಸ್ವಾಮೀಜಿಗಳ ಬೇಡಿಕೆ

---Advertisement---

ಬೆಂಗಳೂರು, ಮೇ. 03 :ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.

ಸ್ವಾಮೀಜಿಗಳ ನಿಯೋಗದ ಬೇಡಿಕೆಯಂತೆ ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.

ಉಪ್ಪಾರ ಸಮಾಜದ ಪುರುಷೋತ್ತಮಾನಂದ ಸ್ವಾಮೀಜಿ ನೇತೃತ್ವದ ಸಮಾಜದ ಮುಖಂಡರ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಜದ ಪ್ರತಿನಿಧಿಗಳಿಗೆ ರಾಜಕೀಯ ಪ್ರತಿನಿಧ್ಯ ನೀಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿತು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...