Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಳ್ಳಿಗಳಲ್ಲಿ ಶುದ್ಧ ಪರಿಸರ ಮತ್ತು ಶುದ್ಧ ಕುಡಿಯುವ ನೀರು ಒದಗಿದರೆ ಶುದ್ಧ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

ಚಿತ್ರದುರ್ಗ, (ಅ.22) : ಶುದ್ಧನೀರು ಆರೋಗ್ಯಕ್ಕೆ ಅಗತ್ಯವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದಲ್ಲಿ ಶುಕ್ರವಾರ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮಿಜಿ ಜೊತೆ ಚರ್ಚಿಸಿ ಭೋವಿಹಟ್ಟಿ, ಕಾಲೋನಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಶುದ್ಧ ಪರಿಸರ ಮತ್ತು ಶುದ್ಧ ಕುಡಿಯುವ ನೀರು ಒದಗಿದರೆ ಶುದ್ಧ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಕುಡಿಯುವ ನೀರಿಗೆ ಸಮಸ್ಯೆ ಉಂಟಾಗ ಬಾರದೆಂದು ಅಧಿಕಾರಿಗಳಿಗೆ ಎಚ್ಚರಿಸುತ್ತಿರುತ್ತೇನೆ. ಯಾವುದೇ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದರೆ ತಕ್ಷಣ ಆ ಸಮಸ್ಯೆಯನ್ನು ಬಗೆಹರಿಸಲಾಗುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅನೇಕ ಹಳ್ಳಿಗಳಲ್ಲಿ ಈಗಾಗಲೇ ಸ್ಥಾಪಿಸಲಾಗಿದೆ. ಈಗ ಅಗತ್ಯವಿರುವ ಹಳ್ಳಿಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣಮಾಡಲಾಗುವುದು ಎಂದು ತಿಳಿಸಿದರು.

ಕೆಳಗೋಟೆಯಲ್ಲಿ ಎಸ್.ಜೆ.ಎಸ್. ಜ್ಞಾನಪೀಠಕ್ಕೆ ಸಂಬಂಧಿಸಿದ ಖಾಲಿನಿವೇಶನದಲ್ಲಿ ಭೋವಿ ಜನಾಂಗದ ಸಮಗ್ರ ಅಭಿವೃದ್ಧಿಗೆ ವಿದ್ಯಾರ್ಥಿನಿಲಯ, ವಾಣಿಜ್ಯ ಸಂಕೀರ್ಣ, ಸಮುದಾಯ ಭವನ ನಿರ್ಮಾಣಮಾಡಿ ಆ ಮೂಲಕ ಆ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುತ್ತೇನೆಂದು ಹೇಳಿದರು.

ಯುವಕರು ಬಹಳಷ್ಟು ಜನ ಇದ್ದಾರೆ. ಅವರಿಗೆ ಅಗತ್ಯವಿರುವ ಶಿಕ್ಷಣವಿದ್ದರೂ ಸಹ ಕೌಶಲ್ಯ ತರಬೇತಿಗಳನ್ನು ನೀಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಆರ್ಥಿಕ ಸ್ವಾವಲಂಬನೆಯನ್ನು ಹೊಂದುವಂತಹ ಕಾರ್ಯ ನಡೆಯಬೇಕು ಎಂದು ಹೇಳಿದರು.

ಭೋವಿಗುರುಪೀಠದ ಶ್ರಿ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಯುವ ಮುಖಂಡ ಸಿದ್ಧಾರ್ಥ ಹಾಗೂ ಗ್ರಾಮಪಂಚಾಯಿತಿ ಸದಸ್ಯರುಗಳು ಮತ್ತು ಮುಖಂಡರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

error: Content is protected !!