Connect with us

Hi, what are you looking for?

ಪ್ರಮುಖ ಸುದ್ದಿ

ಕೋವಿಡ್ ಕೇರ್ ಸೆಂಟರ್‍ನಲ್ಲಿ ಸರ್ಕಾರಿ ನೌಕರರಿಗೆ ವ್ಯವಸ್ಥೆ; ಕೆ.ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ : ಜಿಲ್ಲಾ ಸರ್ಕಾರಿ ನೌಕರರ ಸಂಘದ ಮನವಿಗೆ ಡಿಎಚ್‍ಒ ಡಾ.ಪಾಲಾಕ್ಷ ಅವರು ಸ್ಪಂದಿಸಿ, ನಗರದ ಕೋವಿಡ್ ಕೇರ್ ಸೆಂಟರ್‍ನಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಿದ್ದಾರೆ.

ಜಿಲ್ಲೆಯ ಎಲ್ಲಾ ವರ್ಗದ ಸರ್ಕಾರಿ ನೌಕರರಿಗೂ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್ ಅನ್ನು ತೆರೆಯಲು ಸಂಘದಿಂದ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಡಿಎಚ್‍ಒ ನಗರದ ಬಿ.ವಿ.ಕೆ.ಎಸ್. ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಸರ್ಕಾರಿ ನೌಕರರಿಗೆ 50 ಹಾಸಿಗೆಗಳು ಕಾಯ್ದಿರಿಸಿದ್ದಾರೆ.

ಈ ಕೋವಿಡ್ ಕೇರ್ ಸೆಂಟರ್‍ನಲ್ಲಿ ವೈದ್ಯರು, ಶುಶ್ರೂಷಕರು ದಿನದ 24 ತಾಸು ಕರ್ತವ್ಯ ನಿರ್ವಹಿಸುತ್ತಾರೆ. ಸೋಂಕಿತರಿಗೆ ಊಟ, ಔಷಧ ಮತ್ತು ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ಎರಡು ದಿನದಲ್ಲಿ ಆಮ್ಲಜನಕ ಸಾಂದ್ರಕವನ್ನು ಸಹ ಒದಗಿಸುವುದಾಗಿ ಡಿಎಚ್‍ಒ ತಿಳಿಸಿದ್ದಾರೆ.

ಇದೇ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸರ್ಕಾರಿ ನೌಕರರಿಗೆ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಜಿಲ್ಲಾ ಸಂಘದ ಅಧ್ಯಕ್ಷ ಕೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಿ.ಆರ್.ಪ್ರದೀಪ್ ಕುಮಾರ್, ಖಜಾಂಚಿ ವೀರೇಶ್, ರಾಜ್ಯ ಪರಿಷತ್ ಸದಸ್ಯ ಕೆ.ಟಿ.ತಿಮ್ಮಾರೆಡ್ಡಿ, ಉಪಾಧ್ಯಕ್ಷ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಬಿ.ಆರ್.ತಿಪ್ಪೇಸ್ವಾಮಿ ಹಾಗೂ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಜಿ.ಟಿ.ಹನುಮಂತಪ್ಪ, ತಾಲೂಕು ಅಧ್ಯಕ್ಷೆ ಬಿ.ಟಿ.ಲೋಲಾಕ್ಷಮ್ಮ, ಗೌರವಾಧ್ಯಕ್ಷ ಬಿ.ಕೆ.ಹನುಮಂತಪ್ಪ ಹಾಜರಿದ್ದರು.

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!