ಗೃಹ ಸಚಿವರ ಜೊತೆಗೆ ದಿವ್ಯಾ ಫೋಟೋ ಹಾಕಿದ್ದ ಕಾಂಗ್ರೆಸ್ ನಾಯಕರು.. ಇದೀಗ ಡಿಕೆಶಿ ಜೊತೆಗಿನ ಫೋಟೋ ಹಾಕಿದ ಬಿಜೆಪಿ

suddionenews
1 Min Read

ಬೆಂಗಳೂರು: ಪಿಎಸ್ಐ ಅಕ್ರಮದ ಹಿಂದಿರುವ ಒಬ್ಬೊಬ್ಬರನ್ನೇ ಪೊಲೀಸರು ಬಂಧಿಸುತ್ತಿದ್ದಾರೆ. ಆದರೆ ಅದರ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ ಯಾವಾಗ ಎಂದು ಕಾಂಗ್ರೆಸ್ ನಾಯಕರು ಕೇಳುತ್ತಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆಗೆ ದಿವ್ಯಾ ಹಾಗರಗಿ ಇರುವ ಫೋಟೋವನ್ನು ಬಿಜೆಪಿ ಹಂಚಿಕೊಂಡಿದೆ.

ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ‌‌ ನೋಡಿ..!!! ಈ ಚಿತ್ರ ಏನು ಹೇಳುತ್ತದೆ?. ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ!. ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ?.

√ ಸಿಡಿ ವಿವಾದ
√ ಹಿಜಾಬ್ ಸಂಘರ್ಷ
√ 40% ಪರ್ಸೆಂಟ್ ಕಮಿಷನ್
√ ಹರ್ಷ ಕೊಲೆ
√ ಹುಬ್ಬಳ್ಳಿ ಗಲಭೆ
√ ಪಿಎಸ್ಐ ನೇಮಕ ಹಗರಣ

ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ @DKShivakumar ಅವರೇ, ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ?. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ @DKShivakumar ಅವರು ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರ್ಯಕ್ಕೂ ಈಗ ದಾಖಲೆ ಲಭಿಸುತ್ತಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡ!. ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ @PriyankKharge ಅವರೇ, ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ?. ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ?. ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ?. ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *