ಪಿಯು ಬೋರ್ಡ್ ಎಡವಟ್ಟು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಂಗಾಲು 

1 Min Read

 

ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ರಾಜ್ಯದ್ಯಂತ 1,217 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದೆ.

ಆದರೆ ಇಂದು ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ ಮಂಡಳಿ ಮಾಡಿರುವ ಯಡವಟ್ಟಿಗೆ ಎಕ್ಸಾಂ ಬರೆಯಲು ಬಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.ಪರೀಕ್ಷಾ ಕೇಂದ್ರ ಇರೋದೆ ಒಂದು ಕಡೆಯಾದರೆ ಹಾಲ್‌ ಟಿಕೆಟ್‌ನಲ್ಲಿ ನಮೂದಿಸಿರುವ ವಿಳಾಸವೇ ಬೇರೆ ಆಗಿರುವ ಕಾರಣಕ್ಕೆ ದ್ವೀತಿಯ ಪಿಯು ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಯಾದಗಿರಿಯಲ್ಲಿ ಪರದಾಡಿದ್ದಾರೆ.

ಯಾದಗಿರಿ ನಗರ ಸಬಾ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದ ವಿಚಾರವಾಗಿ ಗೊಂದಲ ಉಂಟಾಗಿದ್ದು, ಬೇರೆ ಬೇರೆ ಊರುಗಳಿಂದ‌ ಬಂದ ವಿದ್ಯಾರ್ಥಿಗಳು ಕೆಲ ಕಾಲ ಆತಂಕ್ಕೆ ಒಳಗಾದ ಪ್ರಸಂಗ ನಡೆದಿದೆ. ಕಾಲೇಜು ಇರೋದು ಲುಂಬಿನಿ ಪಾರ್ಕ್ ಹತ್ತಿರವಾದ್ರೆ, ಹಾಲ್ ಟಿಕೆಟ್​​ನಲ್ಲಿ ಗಂಜ್ ರೋಡ್ ಎಂದು ನಮೂದಿಸಲಾಗಿದೆ. ಹೀಗಾಗಿ ಗಂಟೆಗಳ ಕಾಲ ಪರೀಕ್ಷಾ ಕೇಂದ್ರಕ್ಕಾಗಿ ಹುಡುಕಾಡಿರುವ ವಿದ್ಯಾರ್ಥಿಗಳು ಅಂತಿಮವಾಗಿ ಸ್ಥಳೀಯರ ಸಹಾಯದಿಂದ ಸಬಾ ಪಿಯು ಕಾಲೇಜು ತಲುಪಿದ್ದಾರೆ.

Share This Article
Enable Notifications OK No thanks