Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫಲಿತಾಂಶಕ್ಕಾಗಿ ಕಾಯ್ತಿದ್ದ ಪಿಯು ವಿದ್ಯಾರ್ಥಿಗಳಿಗೆ ನಿರಾಸೆ..!

---Advertisement---

ಬೆಂಗಳೂರು: ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುವ ಮಕ್ಕಳಿಗೆ ಗೊತ್ತು ಆ ಟೆನ್ಶನ್ ಏನು ಅಂತ. ನಾಳೆ ಇನ್ನೇನು ಫಲಿತಾಂಶ ಹೊರ ಬೀಳುತ್ತೆ, ನಮ್ಮ ಮುಂದಿನ ಭವಿಷ್ಯದ ಯೋಚನೆಗೆ ನಾಂದಿ ಹಾಡುತ್ತೆ ಎನ್ನುವಾಗಲೇ ಬೇಸರ ತರಿಸಿದೆ. ನಾಳೆ ಘೋಷಣೆ ಆಗಬೇಕಿದ್ದ ರಿಸಲ್ಟ್ ಪ್ರಕಟವಾಗ್ತಾ ಇಲ್ಲ. ಇವತ್ತು ಸಂಜೆ ತನಕ ಪೋಷಕರು ಕೂಡ ಕಾದಿದ್ದಾರೆ. ನಾಳೆ ಫಲಿತಾಂಶ ಪ್ರಕಟದ ಬಗ್ಗೆ ಏನಾದ್ರೂ ನಿರ್ಧಾರ ತೆಗೆದುಕೊಳ್ಳಬಹುದು ಎಂದು. ಆದರೆ ಸರ್ಕಾರದಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೊದಲ ವಾರದಲ್ಲಿಯೇ ಫಲಿತಾಂಶ ಪ್ರಕಟ ಮಾಡುವುದರ ಬಗ್ಗೆ ಮಾತನ್ನಾಡಿದ್ದರು.

ಹೀಗಾಗಿ‌ ನಾಳೆ ಮಕ್ಕಳ ಫಲಿತಾಂಶ ಬರಬಹುದು ಎಂದು ವಿದ್ಯಾರ್ಥಿಗಳು ಮಾತ್ರವಲ್ಲ ಪೋಷಕರು ಕೂಡ ಕಾಯ್ತಾ ಇದ್ದರು. ಆದರೆ ನಿರಾಸೆಯಾಗಿದೆ. ನಾಳೆ ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ತಿಳಿಸಿದ್ದಾರೆ.

 

ಈ ಬಾರಿ ಕಳೆದ ವರ್ಷಕ್ಕಿಂತ ಬೇಗನೇ ಫಲಿತಾಂಶ ಬರಲಿದೆ ಎಂದೇ ವಿದ್ಯಾರ್ಥಿಗಳು ಖುಷಿ ಪಟ್ಟಿದ್ದರು. ಮಾರ್ಚ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಕಾರ್ಯ ಚುರುಕಿನಿಂದ ಸಾಗಿತ್ತು. ಆದರೆ, ಈಗ ಕೊನೆಯ ಕ್ಷಣದಲ್ಲಿ ಮೌಲ್ಯಮಾಪನ ಪ್ರಕ್ರಿಯೆಯ ಸಣ್ಣ ಪುಟ್ಟ ಕೆಲಸಗಳು ಬಾಕಿ ಇರುವುದರಿಂದ ಫಲಿತಾಂಶದ ದಿನಾಂಕ ಮುಂದೂಡಲ್ಪಟ್ಟಿದ್ದು,  ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಇನ್ನು ಫಲಿತಾಂಶ ಯಾವಾಗ? ಏನು ಅಂತ ಶಿಕ್ಷಣ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...