ಸಾರ್ವಜನಿಕರು ತಾಲೂಕು ಕಚೇರಿ ಅಥವಾ ನಾಡ ಕಚೇರಿಗಳಿಗೆ ಅವಲಂಬಿಸುವ ಅಗತ್ಯವಿಲ್ಲ ;  ತಹಶೀಲ್ದಾರ್ ಎಂ. ರಘುಮೂರ್ತಿ

ಚಳ್ಳಕೆರೆ, (ಏ.07) : ಸಾರ್ವಜನಿಕರು ಇನ್ನು ಮುಂದೆ ತಾಲೂಕು ಕಚೇರಿ ಅಥವಾ ನಾಡ ಕಚೇರಿಗಳನ್ನು ಅವಲಂಬಿಸುವ ಅಗತ್ಯವಿಲ್ಲ.

ಬದಲಾಗಿ ಈ ಸೇವೆಗಳನ್ನು ನಿಮ್ಮ ಗ್ರಾಮದ ಅಥವಾ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿ ಪಡೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದ್ದರಿಂದ ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಹಶೀಲ್ದಾರ್ ಎಂ. ರಘುಮೂರ್ತಿ ಹೇಳಿದರು.

ತಾಲ್ಲೂಕಿನ ನಾಯಕನಹಟ್ಟಿ ಪಟ್ಟಣ ಪಂಚಾಯತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಮುಖಾಂತರ 150 ಕ್ಕೂ ಹೆಚ್ಚು ಸೌಲಭ್ಯ, ಸೇವೆಗಳು ಒಂದೇ ಸೂರಿನಡಿ ಲಭ್ಯವಿರುವುದರಿಂದ ನಾಗರಿಕ ಸಮಾಜದ ಒಬ್ಬ ಕಟ್ಟಕಡೆಯ ವ್ಯಕ್ತಿ ಅಂದಾಜು 40 ಕಿಲೋ ಮೀಟರಿಗೂ ಹೆಚ್ಚು ಅಂತರವನ್ನು ಕ್ರಮಿಸಿ ತಾಲೂಕು ಕಚೇರಿ ಅಥವಾ ನಾಡ ಕಚೇರಿಗಳಿಗೆ ಬಂದು ಈ ಕಚೇರಿಗಳಲ್ಲಿ ಸರದಿ ಸಾಲಿನಲ್ಲಿ ನಿಂತು ಕೆಲವೊಮ್ಮೆ ವಿದ್ಯುತ್ ವ್ಯತ್ಯಯ ಅಥವಾ ತಾಂತ್ರಿಕ ಕಾರಣಗಳಿಂದ ಹಲವು ಗಂಟೆಗಳನ್ನು ಕಳೆದು ತನ್ನ ಹಣ ಸಮಯ ಮತ್ತು ಸಂಯಮವನ್ನು ವ್ಯರ್ಥ ಮಾಡಕೂಡದೆಂದು ಸರ್ಕಾರವು ದಿಟ್ಟ ತೀರ್ಮಾನ ತೆಗೆದುಕೊಂಡಿದೆ.

ಚಳ್ಳಕೆರೆ ತಾಲೂಕಿನ 70 ಕೇಂದ್ರಗಳಲ್ಲಿ ಗ್ರಾಮ ಒನ್ ಸೆಂಟರ್ ಗಳನ್ನು ಮಂಜೂರಿ ಮಾಡಿ ಈಗಾಗಲೇ 40 ಗ್ರಾಮಪಂಚಾಯಿತಿಗಳಲ್ಲಿ ಈ ಗ್ರಾಮದ ಸೆಂಟರ್ ಗಳನ್ನು ಸ್ಥಾಪಿಸಿ 150 ಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ.

ಕೆಲವು ನಾಗರಿಕರು ವಿನಾಕಾರಣ ತಾಲೂಕು ಕಚೇರಿಗೆ ಬಂದು ಮೇಲ್ಕಂಡಂತೆ  ನಾಗರಿಕ ಸೇವೆಗಳು ಪಡೆಯಲು ಬಂದು ತಮ್ಮ ಹಣ ಸಮಯ ಮತ್ತು ಸಂಯಮವನ್ನು ವ್ಯರ್ಥ ಮಾಡುತ್ತಿರುವುದು ವಿಷಾದದ ಸಂಗತಿ.

ದಯಮಾಡಿ ಯಾವುದೇ ನಾಗರಿಕರು ಗ್ರಾಮ ಪಂಚಾಯಿತಿ ಮಟ್ಟದಿಂದ ಈ ಸೇವೆಗಳನ್ನು ಪಡೆಯಲು ಕಚೇರಿಗೆ ಅಲೆದಾಡ ಕೂಡದೆಂದು ಮನವಿ ಮಾಡಿದರು.

ಸಾರ್ವಜನಿಕರು ನೀಡುವ ಯಾವುದೇ ಇಲಾಖೆ ಯಾವುದೇ ಸೇವೆಯ ಎಲ್ಲಾ ಅರ್ಜಿಗಳನ್ನು ಗ್ರಾಮ ಒನ್ ಸೆಂಟರ್ ನಲ್ಲಿ ಪಡೆದುಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಅದರಂತೆ ಎಲ್ಲ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದು ಸರ್ಕಾರದ ಆಶಯವು ಸಫಲವಾಗುವಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿ ಕೋಡಿ ಭೀಮರಾವ್, ಉಪ ತಹಶೀಲ್ದಾರ್ ಚೇತನ್ ಕುಮಾರ್ ಮತ್ತು ಪಟ್ಟಣ ಪಂಚಾಯತಿಯ ಸದಸ್ಯರುಗಳು ಉಪಸ್ಥಿತರಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

39 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago