Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾಭಿವೃದ್ಧಿಗೆ ಸಾರ್ವಜನಿಕ ಸಹಭಾಗಿತ್ವ ಅಗತ್ಯ : ಸಚಿವ ಎಸ್.ಮಧು ಬಂಗಾರಪ್ಪ

---Advertisement---

 

ಚಿತ್ರದುರ್ಗ. ಆಗಸ್ಟ್. 16: ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೇವಲ ಸರ್ಕಾರದ ಕರ್ತವ್ಯ ಮಾತ್ರವಲ್ಲದೇ, ಸಾರ್ವಜನಿಕರು, ಗ್ರಾಮಸ್ಥರು, ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವೈಯಕ್ತಿಕ ಕರ್ತವ್ಯವೂ ಹೌದು. ಶಿಕ್ಷಣಕ್ಕೆ ಒತ್ತು ನೀಡುವುದು ಸಾರ್ವಜನಿಕರ ಸಾಮಾಜಿಕ ಜವಾಬ್ದಾರಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಹಿರಿಯೂರು ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶತಮಾನ ಪೂರೈಸಿರುವ ತಾಳವಟ್ಟಿ ಸರ್ಕಾರಿ ಶಾಲೆಗೆ ಹಳೆಯ ವಿದ್ಯಾರ್ಥಿಗಳ ನೆರವು ಹಾಗೂ ದಾನಿಗಳ ಸಹಾಯದಿಂದ ಉತ್ತಮ ಕಾಯಕಲ್ಪ ನೀಡಿದ್ದು, ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಮಾತನಾಡಿ, ತಾಳವಟ್ಟಿ ಗ್ರಾಮದಲ್ಲಿ ವಿಶೇಷವಾದ ಸಂಭ್ರಮ. ಗ್ರಾಮದ ಹಿರಿಯರು ಸೇರಿ ಸುಮಾರು ರೂ.1 ಕೋಟಿ ಹಾಗೂ ಸರ್ಕಾರದಿಂದ ರೂ.25 ಲಕ್ಷ ವೆಚ್ಚ ಮಾಡಿ ಶತಮಾನೋತ್ಸವ ಶಾಲಾ ಕಟ್ಟಡ ಉದ್ಘಾಟನೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಪ್ರತಿಭಾವಂತ ಶಿಕ್ಷಕರಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲು, ಮೊಟ್ಟೆ, ಸಮಸ್ತ್ರ, ಶೂ ಸೇರಿದಂತೆ ಹಲವಾರು ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.

ಹಿರಿಯೂರು ವಿಧಾನ ಕ್ಷೇತ್ರದಲ್ಲಿ ಸುಮಾರು 250 ಶಾಲಾ ತರಗತಿ ಕೊಠಡಿಗಳು, 100ಕ್ಕೂ ಹೆಚ್ಚು ಶೌಚಾಲಯ ಹಾಗೂ ಕಾಂಪೌಂಡ್‍ಗಳನ್ನು ನಿರ್ಮಾಣಕ್ಕಾಗಿ ರೂ.30 ಕೋಟಿ ವೆಚ್ಚದಲ್ಲಿ ಯೋಜನೆ ಸಿದ್ದಪಡಿಸಲಾಗಿದ್ದು, ಶೀಘ್ರದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ಸಾರ್ವಜನಿಕ ಪಾಲುಗಾರಿಕೆಯಿಂದ ಶಾಲೆಗಳ ಅಭಿವೃದ್ಧಿಯಾಗಲಿದೆ. ಗ್ರಾಮಸ್ಥರ ಮನವಿಯಂತೆ ಐಮಂಗಲ ಹೋಬಳಿಯ ವ್ಯಾಪ್ತಿಯಲ್ಲಿ ಸುಮಾರು 4 ಎಕರೆ ವಿಸ್ತೀರ್ಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ತಾಳವಟ್ಟಿ ಶಾಲೆ ಅನೇಕ ಹಿರಿಯರಿಗೆ ಶಿಕ್ಷಣ ಕೊಡುವುದರಲ್ಲಿ 100 ವರ್ಷಗಳ ದೊಡ್ಡ ಯಶಸ್ಸು ಕಂಡಿದೆ. ಯಶಸ್ವಿನ ಪ್ರತಿಫಲವಾಗಿ ಶತಮಾನೋತ್ಸವ ಆಚರಣೆ ಮಾಡಿ ಮಾದರಿ ಶಾಲೆಯನ್ನಾಗಿ ರೂಪಿಸಲಾಗಿದೆ ಎಂದು ತಿಳಿಸಿದ ಅವರು, ತಾಳವಟ್ಟಿ ಸರ್ಕಾರಿ ಶಾಲೆಯ ಅಭಿವೃದ್ಧಿ ಸಂಪೂರ್ಣ ಸಹಕಾರ ಹಾಗೂ ಅಗತ್ಯ ಅನುದಾನವನ್ನೂ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಶಾಲಾ ಶಿಕ್ಷಣ ಉಪನಿರ್ದೇಶಕರಾದ ಎಂ.ಆರ್.ಮಂಜುನಾಥ್, ನಾಸಿರುದ್ದೀನ್, ತಹಶೀಲ್ದಾರ್ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಶಾಲಾ ಪುನಃಶ್ಚೇತನ ಮತ್ತು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಡಾ. ವಿ.ವೀರಭದ್ರಯ್ಯ, ಗೌರವಾಧ್ಯಕ್ಷ ಎ.ಚಂದ್ರಾರೆಡ್ಡಿ, ಕಾರ್ಯಾಧ್ಯಕ್ಷ ಜಲೀಲ್ ಸಾಬ್, ವಿಶ್ವ ಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ನೀಲಕಂಠದೇವ, ಸಮಿತಿಯ ಲಕ್ಷ್ಮಿಕಾಂತ್ ಸೇರಿದಂತೆ ಮತ್ತಿತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment