Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರ್ವಜನಿಕರ ಭದ್ರತೆ ಪೊಲೀಸರ ಮೊದಲ ಆದ್ಯತೆ: ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ : ಎ. ಎಸ್‌ಪಿ. ಶಿವಕುಮಾರ್

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 24 : ಸಾರ್ವಜನಿಕರ ಭದ್ರತೆ ಮತ್ತು ಶಾಂತಿ ಕಾಪಾಡುವುದು ಪೊಲೀಸರ ಮೊದಲ ಆದ್ಯತೆಯಾಗಿದ್ದು, ಯಾವುದೇ ರೀತಿಯ ತೊಂದರೆ ಎದುರಾದರೆ ಜನರು ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ್ ಹೇಳಿದರು.

ನಗರದ ಡಿವೈಎಸ್ಪಿ ಕಚೇರಿ ಆವರಣದಲ್ಲಿ ನಡೆದ ತಾಲೂಕು ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಚಳ್ಳಕೆರೆ ತಾಲೂಕು ಸೇರಿದಂತೆ ಜಿಲ್ಲೆಯ ಆರು ತಾಲೂಕುಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಟ್ರಾಫಿಕ್ ಸಿಗ್ನಲ್‌ಗಳ ಅಳವಡಿಕೆ ಕುರಿತು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಗಾಂಜಾ ಸೇವನೆ ಮತ್ತು ಮದ್ಯಪಾನ ಪರೀಕ್ಷೆಗಾಗಿ ವಿಶೇಷ ಕಿಟ್‌ಗಳನ್ನು ಪೊಲೀಸ್ ಇಲಾಖೆ ತರಿಸಿಕೊಂಡಿದ್ದು, ಎಲ್ಲಾ ಠಾಣೆಗಳಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರು ನಿಖರ ಮಾಹಿತಿ ನೀಡಿದರೆ, ಪೊಲೀಸರು ಹಠಾತ್ ಭೇಟಿ ನೀಡಿ ತಪ್ಪಿತಸ್ಥರನ್ನು ಬಂಧಿಸುವುದಾಗಿ ಹೇಳಿದರು. ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಅಪನಂಬಿಕೆ ದೂರವಾಗಬೇಕು; ಜನರ ಸಹಕಾರ ದೊರೆತರೆ ಮಾತ್ರ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಚಳ್ಳಕೆರೆಯಲ್ಲಿ ಕಳೆದ ಎರಡು-ಮೂರು ತಿಂಗಳಿಂದ ಸರಗಳ್ಳತನ ಪ್ರಕರಣಗಳು ಕಡಿಮೆಯಾಗಿದ್ದು, ಇದಕ್ಕೆ ಪೊಲೀಸ್ ಸಿಬ್ಬಂದಿಯ ಬೀಟ್ ವ್ಯವಸ್ಥೆ ಹೆಚ್ಚಿಸಿರುವುದು ಕಾರಣ ಎಂದರು. ಕಾಲೇಜು ಆರಂಭ ಮತ್ತು ಮುಕ್ತಾಯ ಸಮಯದಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಮಹಿಳಾ ಪೇದೆಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಟ್ರಾಫಿಕ್ ನಿಯಂತ್ರಣಕ್ಕೆ ಕ್ರಮ :
ಚಳ್ಳಕೆರೆ ತಾಲೂಕಿನಲ್ಲಿ ಸಂಚಾರಿ ಪೊಲೀಸ್ ಠಾಣೆ ಇಲ್ಲದಿರುವ ಹಿನ್ನೆಲೆ ಕೆಲ ಮಟ್ಟಿಗೆ ಟ್ರಾಫಿಕ್ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆ, ಇರುವ ಪೊಲೀಸರೇ ವೈಟ್ ಶರ್ಟ್ ಧರಿಸಿ ಟ್ರಾಫಿಕ್ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಅಬಕಾರಿ ಇಲಾಖೆಯ ಜೊತೆಗೆ ಪೊಲೀಸ್ ಇಲಾಖೆಯೂ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಪ್ರಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಾರ್ವಜನಿಕರಿಂದ ಅಹವಾಲುಗಳ ಮಳೆ

ಸಭೆಯಲ್ಲಿ ಮಾತನಾಡಿದ ನಗರಸಭೆ ಮಾಜಿ ನಾಮನಿರ್ದೇಶಿತ ಸದಸ್ಯ ಬದ್ರಿ, 2015ರಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಹಣ ವರ್ಗಾಯಿಸಿದ್ದರೂ ಇದುವರೆಗೆ ಕಾಮಗಾರಿ ನಡೆಯದಿರುವುದನ್ನು ಪ್ರಶ್ನಿಸಿದರು. ಇದರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹಾಗೂ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ದೂರಿದರು.

ಟಿ. ಮೈಲಾರಪ್ಪ, ಮದಕರಿ ನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗಾಂಜಾ ಮಾರಾಟ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಟ್ಕಾ ಜೂಜಾಟ ಹೆಚ್ಚುತ್ತಿರುವುದಾಗಿ ಹೇಳಿ, ಮಹಿಳೆಯರ ಸರಗಳ್ಳತನ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಎಸ್. ಸೈಯದ್, ವಾಹನ ಸವಾರರ ಅತಿವೇಗದಿಂದ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿದೆ. ಬೈಪಾಸ್ ರಸ್ತೆಗಳಲ್ಲಿ ವೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಅಹವಾಲು ಮತ್ತು ಸಲಹೆಗಳನ್ನು ಪೊಲೀಸ್ ಅಧಿಕಾರಿಗಳು ದಾಖಲಿಸಿಕೊಂಡು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಸತ್ಯನಾರಾಯಣರಾವ್, ತಳುಕು ವೃತ್ತ ನಿರೀಕ್ಷಕ ಹನುಮಂತಪ್ಪ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...