Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನರ ಸಮಸ್ಯೆ ಆಲಿಸಲು ‘ಪ್ರಜಾಸೇವೆ ಇಲಾಖೆ ಆರಂಭ; ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಕೌಂಟರ್!

---Advertisement---

ಬೆಂಗಳೂರು.ಜುಲೈ.04: ಸಾರ್ವಜನಿಕರ ದೂರು ಹಾಗೂ ಬೇಡಿಕೆಗಳಿಗೆ ತ್ವರಿತ ಮತ್ತು ಶಾಶ್ವತ ಪರಿಹಾರ ನೀಡಲು ಕರ್ನಾಟಕ ಸರ್ಕಾರವು ಮಹತ್ವಾಕಾಂಕ್ಷಿ ಪ್ರಜಾಸೇವೆ ಇಲಾಖೆಯನ್ನು ಆರಂಭಿಸಲು ನಿರ್ಧರಿಸಿದೆ. ಪಾರದರ್ಶಕ, ಸುಲಭ ಹಾಗೂ ಜನಸ್ನೇಹಿ ಆಡಳಿತವನ್ನು ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಪ್ರಮುಖ ಜನಪರ ನಿರ್ಧಾರವನ್ನು ಕೈಗೊಂಡಿದೆ.

ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಈ ಪ್ರಜಾಸೇವೆ ಇಲಾಖೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳ ಕೌಂಟರ್ಗಳು ಇರಲಿವೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಬೇಡಿಕೆಗಳನ್ನು ಒಂದೇ ಸ್ಥಳದಲ್ಲಿ ಸಲ್ಲಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಈ ಇಲಾಖೆಯ ಅತ್ಯಂತ ದಕ್ಷ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ಸರ್ಕಾರವು ಪ್ರತ್ಯೇಕವಾಗಿ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದೆ.

ಸಚಿವರಿಗೆ ಪ್ರತಿ ತಿಂಗಳು 2 ದಿನ ಕ್ಷೇತ್ರ ಭೇಟಿ ಕಡ್ಡಾಯ. ಮಾಡಲಾಗಿದ್ದು, ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೇ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವೆ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದೆ. ಇದರ ಅನ್ವಯ ಪ್ರತಿ ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ 2 ದಿನ ಕಡ್ಡಾಯವಾಗಿ ಕ್ಷೇತ್ರ ಪ್ರವಾಸ ಮಾಡಬೇಕಾಗುತ್ತದೆ. ಪ್ರತಿ ತಿಂಗಳ 1ನೇ ಮತ್ತು 3ನೇ ಶನಿವಾರದಂದು ಸಚಿವರು ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಪ್ರತಿ ಭೇಟಿಯ ಸಂದರ್ಭದಲ್ಲಿ ಕನಿಷ್ಠ 2 ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದು ಕಡ್ಡಾಯಗೊಳಿಸಲಾಗಿದೆ.

Join WhatsApp

Join Now

Join Telegram

Join Now