ಚಿತ್ರದುರ್ಗ. ಜ.27: ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಚಿತ್ರದುರ್ಗ ಲೋಕೋಪಯೋಗಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಎ.ಹಸೇನ್ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ದರ್ಜೆ ಸಹಾಯಕ ಆರ್.ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಅಧಿಕಾರಿ, ನೌಕರರ ಸಭೆಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಶ್ರೀನಿವಾಸ್ಗ, ಖಜಾಂಚಿ ಎಸ್.ವಿ.ಶ್ರೀನಿವಾಸ್, ಉಪಾಧ್ಯಕ್ಷರಾದ ಸಿ.ಎಸ್.ಸುಮಾ ಹಾಗೂ ಲೋಕೋಪಯೋಗಿ ಇಲಾಖೆ ಚಿತ್ರದುರ್ಗ ವಿಭಾಗ ಮತ್ತು ಉಪವಿಭಾಗಗಳ ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.











