Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರಡು ಮತದಾರರ ಪಟ್ಟಿ ಪ್ರಕಟ : ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಡಿ. 09 ಕೊನೆಯ ದಿನ

---Advertisement---

ಚಿತ್ರದುರ್ಗ. ಅ.27:  ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಶುಕ್ರವಾರದಂದು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಕಟಿಸಿದರು.

ಕರಡು ಮತದಾರರ ಪಟ್ಟಿ ಪ್ರಕಟ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿಗಳು ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಶುಕ್ರವಾರದಂದು ಪಟ್ಟಿ ಪ್ರಕಟಿಸಲಾಗಿದೆ, ಇದೀಗ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವೂ ಕೂಡ ಪ್ರಾರಂಭವಾಗಿದ್ದು, ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ. 09 ಕೊನೆಯ ದಿನವಾಗಿದೆ.

ಮತದಾರರ ನೊಂದಣಿಗೆ ಸಂಬಂಧಿಸಿದಂತೆ ನವೆಂಬರ್ 18, 19, ಡಿಸೆಂಬರ್ 02 ಮತ್ತು 03 ರಂದು ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು.

ಸದ್ಯ ಜಿಲ್ಲೆಯಲ್ಲಿ ಒಟ್ಟು 1661 ಮತಗಟ್ಟೆಗಳಿದ್ದು, 1401830 ಒಟ್ಟು ಮತದಾರರಿದ್ದಾರೆ.  ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳಿಸಲು ಅರ್ಹರಿರುವ ಎಲ್ಲರನ್ನೂ ಸೇರಿಸಲು, ವಿವಿಧ ರಾಜಕೀಯ ಪಕ್ಷಗಳು ಕೂಡ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ನೀಡಬೇಕು, ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಉಪವಿಭಾಗಾಧಿಕಾರಿ ಕಾರ್ತಿಕ್, ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment