PUC ವಿದ್ಯಾರ್ಥಿಗಳಿಗೆ ಫೆ‌15ರವರೆಗೂ ರಜೆ ವಿಸ್ತರಣೆ..!

suddionenews
1 Min Read

 

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಲೆದೂರಿದ್ದು, ಇದೀಗ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೇ ಪಿಯುಸಿ ಕಾಲೇಜಿಗೆ ರಜೆ ವಿಸ್ತರಣೆಯಾಗಿದೆ.

ಫೆಬ್ರವರಿ 15ರವರೆಗೂ ರಜೆ ವಿಸ್ತರಣೆ ಮಾಡಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈಗಾಗಲೇ ಇದ್ದ ರಜೆಯನ್ನ ವಿಸ್ತರಿಸಿ, ಮಂಗಳವಾರದ ತನಕ ಮುಂದುವರೆಸಿದೆ.

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಮುಂಜಾಗ್ರತ ಕ್ರಮವಾಗಿ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಅನುದಾನ, ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *