ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾವಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ತೋರಿದ್ದಾರೆ. ರಾಜ್ಯದಲ್ಲಿ ಒಟ್ಟು 7 ಲಕ್ಷಕ್ಕೂ ಅಧಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೆಕಡವಾರು 74.67ರಷ್ಟು ಫಲಿತಾಂಶ ಬಂದಿದೆ. 11 ಗಂಟೆಯ ಬಳಿಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ.
ಕಲಾ ವಿಭಾಗದಲ್ಲಿ ಶೇ.61.22
ವಾಣಿಜ್ಯ ವಿಭಾಗದಲ್ಲಿ ಶೇ. 75.89
ವಿಜ್ಞಾನ ವಿಭಾಗದಲ್ಲಿ 2,07,087 ಮಂದಿ ಉತ್ತೀರ್ಣರಾಗಿದ್ದಾರೆ.
ಇನ್ನು ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಸಿಕ್ಕಿದೆ. ಉಡುಪಿ ಎರಡನೇ ಸ್ಥಾನ, ಕೊಡಗು ಮೂರನೇ ಸ್ಥಾನ, ಉತ್ತರ ಕನ್ನಡ ನಾಲ್ಕನೇ ಸ್ಥಾನ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.