ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರವಾಗಿ ಆರ್‌ಎಸ್‌ಎಸ್‌ನ್ನು ಎಳೆದು ತರುವುದು ಸರಿಯಲ್ಲ: ಅರಗ ಜ್ಞಾನೇಂದ್ರ

1 Min Read

 

ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರವಾಗಿ ಆರ್‌ಎಸ್‌ಎಸ್‌ನ್ನು ಎಳೆದು ತರುವುದು ಸರಿಯಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ವಿಕಾಸಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿಚಾರವಾಗಿ ಖಂಡನೆ ಮಾಡದ ಆರ್‌ಎಸ್‌ಎಸ್‌ ಬಗ್ಗೆ ವ್ಯಕ್ತವಾಗುತ್ತಿರುವ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ನೀಡಿದರು.

ಇನ್ನೂ ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ RSS ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದರು.
ಉಪಸಮರ ‘ಕೈ’ ಅಭ್ಯರ್ಥಿ ಘೋಷಣೆ, ಸಿಂದಗಿಗೆ ಅಶೋಕ್‌ ಮನಗೂಳಿ, ಹಾನಗಲ್‌ಗೆ ಶ್ರೀನಿವಾಸ್‌ ಮಾನೆ
ಇದಕ್ಕೆ ಪ್ರತಿಕ್ರಿಯೆ ನೀಡಿ, RSS ಕೆಲಸವೇ ಬೇರೆ, ಅನಗತ್ಯವಾಗಿ ಸಂಘವನ್ನು ಎಳೆದು ತರೋದು ಸರಿಯಲ್ಲ. ಅದನ್ನು ಕೇಳಲು ನಾವಿದ್ದೀವಿ, ನೀವಿದ್ದೀರಲ್ಲ ಎಂದರು.

Share This Article
Leave a Comment

Leave a Reply

Your email address will not be published. Required fields are marked *