Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಸಿದ್ಧತೆ;ಸಿಎಂ

Facebook
Twitter
Telegram
WhatsApp

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಿರುವ ನಗರದ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಅವರ ಮಗಳು ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಕುಟುಂಬದವರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಇದನ್ನು ಸುಗಮವಾಗಿ ನಡೆಸಲು ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಯವರು ಕ್ರಮ ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಪುನೀತ್ ರಾಜ್‌ಕುಮಾರ್ ಜನಪ್ರಿಯ ನಟ. ಅವರ ಅಗಲಿಕೆ ನಮಗೆಲ್ಲರಿಗೂ ದುಃಖ ತಂದಿದೆ. ಅವರನ್ನು ಗೌರವದಿಂದ ಶಾಂತಿಯುತವಾಗಿ ನಾವು ಬೀಳ್ಕೊಡಬೇಕು. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಮಯ- ಈ ಸಂದರ್ಭದಲ್ಲಿ ನಾವು ಸಂಯಮ, ಜವಾಬ್ದಾರಿಯಿಂದ ವರ್ತಿಸಬೇಕಾಗಿದೆ. ಜನರು ಈ ವರೆಗೆ ಅತ್ಯುತ್ತಮವಾಗಿ ಸಹಕರಿಸಿದ್ದಾರೆ. ನಮ್ಮ ಜವಾಬ್ದಾರಿಯುತ ನಡವಳಿಕೆ ಡಾ. ರಾಜ್ ಕುಮಾರ್ ಹಾಗೂ ಪುನೀತ್ ಅವರಿಗೆ ಗೌರವ ಸಲ್ಲಿಸಿದಂತೆ. ಶಾಂತಿ, ಸ್ನೇಹದಿಂದ ಇರುವುದು ಕನ್ನಡಿಗರ ಸಂಸ್ಕೃತಿ. ಇದನ್ನು ನಾವು ಇಂದು ಮೆರೆಯಬೇಕಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!