Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪುನೀತ್ ಕೆರೆಹಳ್ಳಿ ಭೇಟಿ ಮಾಡಿದ ರಾಜ್ಯ ಬಿಜೆಪಿ ನಿಯೋಗ..!

---Advertisement---

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಿವಮೊಗ್ಗ ಗಲಾಟೆ ಆರೋಪ – ಪ್ರತ್ಯಾರೋಪದ ತಿಕ್ಕಾಟ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದೇ ಬಿಜೆಪಿ ಆರೋಪಿಸುತ್ತಿದೆ. ಕಾಂಗ್ರೆಸ್ ಕೂಡ ಈ ವಿಚಾರಕ್ಕೆ ತಿರುಗೇಟು ನೀಡಿದೆ. ಇದೀಗ ರಾಜ್ಯ ಬಿಜೆಪಿ ನಿಯೋಗ, ಪುನೀತ್ ಕೆರೆಹಳ್ಳಿಯನ್ನು ಭೇಟಿ ಮಾಡಿದೆ.

‘ಸಮಾಜಘಾತುಕ ಜಿಹಾದಿಗಳನ್ನು ಅಮಾಯಕರೆಂದು ಬಿಡುಗಡೆ ಮಾಡುವ @INCKarnataka ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ, ನಕಲಿ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ. ಹಿಂದೂ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲಿನ ಆರೋಪಗಳು ಸಾಬೀತಾಗದಿದ್ದರೂ ಆತನ ವಿರುದ್ಧ ಬೇರೆ ಪ್ರಕರಣಗಳಲ್ಲಿ ಸಿಲುಕಿಸಿ ಸರ್ಕಾರ ಹತ್ತಿಕ್ಕುವ ಕೃತ್ಯವೆಸಗುತ್ತಿದೆ.

 

@siddaramaiah ಅವರ ಸರ್ಕಾರ ನ್ಯಾಯ ಒದಗಿಸಬೇಕೆಂದು ಅನಿರ್ದಿಷ್ಟಾವಧಿಯವರೆಗೂ ಉಪವಾಸ ಕೈಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪುನೀತ್‌ರನ್ನು ಬಿಜೆಪಿಯ ಶಾಸಕರುಗಳಾದ ಶ್ರೀ @MTenginkai, ಕು. @BJPBhagirathi, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @siddarajuBJP, ಪರಿಷತ್‌ ಸದಸ್ಯರಾದ ಶ್ರೀ @NswamyChalavadi, ಪ್ರಮುಖರಾದ ಶ್ರೀ ಭಾಸ್ಕರ್ ರಾವ್ ಅವರು ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.

ಬಿಜೆಪಿ ನಿಯೋಗ ಭೇಟಿ ಮಾಡಿರುವ ಫೋಟೋಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದೆ. ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment