ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಿವಮೊಗ್ಗ ಗಲಾಟೆ ಆರೋಪ – ಪ್ರತ್ಯಾರೋಪದ ತಿಕ್ಕಾಟ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದೇ ಬಿಜೆಪಿ ಆರೋಪಿಸುತ್ತಿದೆ. ಕಾಂಗ್ರೆಸ್ ಕೂಡ ಈ ವಿಚಾರಕ್ಕೆ ತಿರುಗೇಟು ನೀಡಿದೆ. ಇದೀಗ ರಾಜ್ಯ ಬಿಜೆಪಿ ನಿಯೋಗ, ಪುನೀತ್ ಕೆರೆಹಳ್ಳಿಯನ್ನು ಭೇಟಿ ಮಾಡಿದೆ.
‘ಸಮಾಜಘಾತುಕ ಜಿಹಾದಿಗಳನ್ನು ಅಮಾಯಕರೆಂದು ಬಿಡುಗಡೆ ಮಾಡುವ @INCKarnataka ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ, ನಕಲಿ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಹಿಂಸೆ ನೀಡುತ್ತಿದೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲಿನ ಆರೋಪಗಳು ಸಾಬೀತಾಗದಿದ್ದರೂ ಆತನ ವಿರುದ್ಧ ಬೇರೆ ಪ್ರಕರಣಗಳಲ್ಲಿ ಸಿಲುಕಿಸಿ ಸರ್ಕಾರ ಹತ್ತಿಕ್ಕುವ ಕೃತ್ಯವೆಸಗುತ್ತಿದೆ.
@siddaramaiah ಅವರ ಸರ್ಕಾರ ನ್ಯಾಯ ಒದಗಿಸಬೇಕೆಂದು ಅನಿರ್ದಿಷ್ಟಾವಧಿಯವರೆಗೂ ಉಪವಾಸ ಕೈಗೊಂಡು ಆಸ್ಪತ್ರೆಗೆ ದಾಖಲಾಗಿರುವ ಪುನೀತ್‌ರನ್ನು ಬಿಜೆಪಿಯ ಶಾಸಕರುಗಳಾದ ಶ್ರೀ @MTenginkai, ಕು. @BJPBhagirathi, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @siddarajuBJP, ಪರಿಷತ್ ಸದಸ್ಯರಾದ ಶ್ರೀ @NswamyChalavadi, ಪ್ರಮುಖರಾದ ಶ್ರೀ ಭಾಸ್ಕರ್ ರಾವ್ ಅವರು ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.
ಬಿಜೆಪಿ ನಿಯೋಗ ಭೇಟಿ ಮಾಡಿರುವ ಫೋಟೋಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದೆ. ಈ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…