ಬೆಂಗಳೂರು : ವಿಶ್ವಾದ್ಯಂತ ಇಂದು ಪುನೀತ್ ರಾಜಕುಮಾರ್ ಅವರ ನಟಿಸಿದ್ದ ಕನಸಿನ ಗಂಧದಗುಡಿ ಟ್ರೈಲರ್ ಅನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ರವರು ಪಿಆರ್‌ಕೆ ಪ್ರೊಡಕ್ಷನ್ ಬ್ಯಾನರ್ ನ ಅಡಿ ಬಿಡುಗಡೆ ಮಾಡಿದ್ದಾರೆ.

ಈ ಸಂತೋಷದ ವಿಷಯವನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

https://twitter.com/narendramodi/status/1578982813579489281?t=cEaXp0Zv2Rr6q_k2u-ML8A&s=19
ಈ ವಿಷಯವಾಗಿ ಮಾನ್ಯ ಪ್ರಧಾನಿ ಮಂತ್ರಿಗಳಾದ ನರೇಂದ್ರ ಮೋದಿಯವರು
ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು” ಎಂದು ಹಾರೈಸಿದ್ದಾರೆ.
https://twitter.com/narendramodi/status/1579013188703907840?t=RQswsZoeGEe_RYxIV3P4Lw&s=19
ಇದಕ್ಕೆ ರೀ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರವರು
“ನಮಸ್ತೆ @narendramodi ಅವರೇ,
ಅಪ್ಪು ಅವರ ಹೃದಯಕ್ಕೆ ಹತ್ತಿರವಾದ ಪ್ರಾಜೆಕ್ಟ್ #ಗಂಧದಗುಡಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡುತ್ತಿರುವ ನಮಗೆ ಇಂದು ಭಾವನಾತ್ಮಕ ದಿನ. ಅಪ್ಪು ಯಾವಾಗಲೂ ನಿಮ್ಮೊಂದಿಗಿನ ಸಂವಾದಗಳನ್ನು ಪಾಲಿಸುತ್ತಿದ್ದರು ಮತ್ತು ನಿಮ್ಮೊಂದಿಗೆ ವೈಯಕ್ತಿಕವಾಗಿ ಹಂಚಿಕೊಳ್ಳಲು ಇಷ್ಟಪಡುತ್ತಿದ್ದರು” ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈಗಾಗಲೇ ಲಕ್ಷಾಂತರ ವೀಡಿಯೋ ವೀಕ್ಷಿಸಿರುವ ಅಭಿಮಾನಿಗಳು ತಮ್ಮ ಆರಾಧ್ಯ ನಟನ ಬಗ್ಗೆ ಭಾವನಾತ್ಮಕವಾಗಿ ಶುಭಹಾರೈಸುವುದರ ಮೂಲಕ ಚಿತ್ರ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.
ಟ್ರೈಲರ್ ನ ವೀಡಿಯೋ ವೀಕ್ಷಿಸಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ:
ವರದಿ:
ಅರ್ಜಿತ್ ಗೋವಿಂಧನ್, 97417 38979

