ಬೆಂಗಳೂರು : ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಸೋಷಿಯಲ್ ಮೀಡಿಯಾ ಫಾಲೋ ಮಾಡ್ತಾ ಇದ್ದವರಿಗೆ ಅಪ್ಪು ಅವರು ಹಾಕಿದ ಆ ಕಡೆಯ ಪೋಸ್ಟ್ ಬಗ್ಗೆ ಸಾಕಷ್ಟು ಗೊಂದಲ, ಕ್ಯೂರಿಯಾಸಿಟಿ ಇತ್ತು. ಆ ವಿಚಾರವನ್ನು ಹೇಳುವ ಮೊದಲೇ ಅಪ್ಪು ಇಹಲೋಕ ತ್ಯಜಿಸಿದ್ದರು.
ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ ಎಂದು ಪೋಸ್ಟ್ ಒಂದನ್ನ ಹಾಕಿದ್ದರು. ಇದೀಗ ಆ ಫೋಟೋ ಹಿಂದಿನ ಕನಸು ನನಸು ಮಾಡಲು ಅಶ್ವಿನಿ ಪುನೀತ್ ರಾಜ್‍ಕುಮಾರ್ ಸಜ್ಜಾಗಿದ್ದಾರೆ.
ಅಪ್ಪು ಕರುನಾಡ ಬಗ್ಗೆ ಡಾಕ್ಯುಮೆಂಟರಿಯೊಂದನ್ನ ಮಾಡಿದ್ದರು. ಅದಕ್ಕೆ ಗಂಧದಗುಡಿ ಎಂದು ಹೆಸರಿಡಲಾಗಿತ್ತು. ಅದರಲ್ಲಿ ಅಪ್ಪು ಕೂಡ ನಟಿಸಿದ್ದರು. ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಟೀಸರ್ ರಿಲೀಸ್ ಮಾಡುವ ಫ್ಲ್ಯಾನ್ ಮಾಡಿಕೊಂಡಿದ್ದರು. ಆದ್ರೆ ವಿಧಿ ಬೇಗನೇ ಅವರನ್ನ ಕರೆದುಕೊಂಡಿದೆ.
ಈ ಬಗ್ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಟ್ವೀಟ್ ವೊಂದನ್ನ ಮಾಡಿದ್ದು, ಅಪ್ಪು ಅವರ ಕನಸೊಂದು 1.11.2021ರಂದು ಕನಸು ಕಾಣಬೇಕಿತ್ತು. ಆದರೆ ಆ ಕನಸಿಗಿಂದು ಅಲ್ಪವಿರಮಾವಷ್ಟೆ. ಅವರ ಕನಸನ್ನು ಅವರಿಷ್ಟದಂತೆಯೇ ನಿಮ್ಮೆದುರಿಗೆ ನನಸಾಗಿಸುವುದು ನಮ್ಮದು. ಇಲ್ಲಿಯ ತನಕ ನೀವೂ ತೋರಿದ ಸಂಯಮ ಮತ್ತು ಸಹಾಕಾರಕ್ಕೆ ನಾವೂ ಆಭಾರಿ ಎಂದು ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…