ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ದೆಹಲಿ ಗಡಿಯಲ್ಲಿ ಚಳುವಳಿನಿರತ ರೈತರ ಮೇಲೆ ಪಂಜಾಬ್ ಸರ್ಕಾರ ದೌರ್ಜನ್ಯ ನಡೆಸಿರುವುದನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಂಯುಕ್ತ ಹೋರಾಟ ಕರ್ನಾಟಕದಿಂದ ಜಿಲ್ಲಾಧಿಕಾರಿ ಮೂಲಕ ಶುಕ್ರವಾರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಕೃಷಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಒಂದು ವರ್ಷ ಐದು ತಿಂಗಳ ಕಾಲ ದೆಹಲಿಯಲ್ಲಿ ರೈತರು ಮುಷ್ಕರ ನಡೆಸಿದಾಗ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರಮೋದಿ ಭರವಸೆ ನೀಡಿ ಇದುವರೆವಿಗೂ ಕರಾಳ ಕಾಯಿದೆಗಳನ್ನು ವಾಪಸ್ ಪಡೆದಿಲ್ಲ. ರಾಷ್ಟ್ರೀಯ ಹಿತಾಸಕ್ತಿಗಳಿಗೆ ಕಂಟಕವಾಗಿರುವ ಯುಎಸ್. ಸೇರಿದಂತೆ ಇತರೆ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳಿಗಾಗಿ ನಡೆಯುತ್ತಿರುವ ಮಾತುಕತೆಗಳನ್ನು ತಕ್ಷಣ ನಿಲ್ಲಿಸಬೇಕು. ರೈತರು ಬೆಳೆಯುವ ಎಲ್ಲಾ ರೀತಿಯ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿಪಡಿಸಬೇಕು. ರೈತರು ಮತ್ತು ಕಾರ್ಮಿಕರ ಸಾಲಗಳನ್ನು ಮನ್ನಾ ಮಾಡುವುದು ಸೇರಿದಂತೆ ಕೃಷಿ ಮತ್ತು ಗ್ರಾಮೀಣ ವಲಯಗಳಲ್ಲಿ ವಿದ್ಯುತ್ ದರ ಹೆಚ್ಚಳ ಸ್ಮಾರ್ಟ್ ಮೀಟರ್ ಹೇರಿಕೆಯನ್ನು ಹಿಂದಕ್ಕೆ ಪಡೆಯಬೇಕು. ಕೊಳವೆ ಬಾವಿಗಳಿಗೆ ಉಚಿತ ವಿದ್ಯುತ್, ಗೃಹ ಬಳಕೆ ಮತ್ತು ಅಂಗಡಿಗಳಿಗೆ ಮುನ್ನೂರು ಯೂನಿಟ್ ವಿದ್ಯುತ್ ಮಂಜೂರು ಮಾಡುವಂತೆ ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿತು.
ಕುಮಾರ್ ಸಮತಳ, ರೈತ ಮುಖಂಡ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಸತ್ಯಪ್ಪ ಮಲ್ಲಾಪುರ, ಕೆ.ಎಂ.ಕಾಂತರಾಜು, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಪುರಷೋತ್ತಮ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

