Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರ ಮೇಲೆ ಪಂಜಾಬ್ ಸರ್ಕಾರದ ದೌರ್ಜನ್ಯ : ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28 : ದೆಹಲಿ ಗಡಿಯಲ್ಲಿ ಚಳುವಳಿನಿರತ ರೈತರ ಮೇಲೆ ಪಂಜಾಬ್ ಸರ್ಕಾರ ದೌರ್ಜನ್ಯ ನಡೆಸಿರುವುದನ್ನು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಂಯುಕ್ತ ಹೋರಾಟ ಕರ್ನಾಟಕದಿಂದ ಜಿಲ್ಲಾಧಿಕಾರಿ ಮೂಲಕ ಶುಕ್ರವಾರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಕೃಷಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಒಂದು ವರ್ಷ ಐದು ತಿಂಗಳ ಕಾಲ ದೆಹಲಿಯಲ್ಲಿ ರೈತರು ಮುಷ್ಕರ ನಡೆಸಿದಾಗ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರಮೋದಿ ಭರವಸೆ ನೀಡಿ ಇದುವರೆವಿಗೂ ಕರಾಳ ಕಾಯಿದೆಗಳನ್ನು ವಾಪಸ್ ಪಡೆದಿಲ್ಲ. ರಾಷ್ಟ್ರೀಯ ಹಿತಾಸಕ್ತಿಗಳಿಗೆ ಕಂಟಕವಾಗಿರುವ ಯುಎಸ್. ಸೇರಿದಂತೆ ಇತರೆ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳಿಗಾಗಿ ನಡೆಯುತ್ತಿರುವ ಮಾತುಕತೆಗಳನ್ನು ತಕ್ಷಣ ನಿಲ್ಲಿಸಬೇಕು. ರೈತರು ಬೆಳೆಯುವ ಎಲ್ಲಾ ರೀತಿಯ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿಪಡಿಸಬೇಕು. ರೈತರು ಮತ್ತು ಕಾರ್ಮಿಕರ ಸಾಲಗಳನ್ನು ಮನ್ನಾ ಮಾಡುವುದು ಸೇರಿದಂತೆ ಕೃಷಿ ಮತ್ತು ಗ್ರಾಮೀಣ ವಲಯಗಳಲ್ಲಿ ವಿದ್ಯುತ್ ದರ ಹೆಚ್ಚಳ ಸ್ಮಾರ್ಟ್ ಮೀಟರ್ ಹೇರಿಕೆಯನ್ನು ಹಿಂದಕ್ಕೆ ಪಡೆಯಬೇಕು. ಕೊಳವೆ ಬಾವಿಗಳಿಗೆ ಉಚಿತ ವಿದ್ಯುತ್, ಗೃಹ ಬಳಕೆ ಮತ್ತು ಅಂಗಡಿಗಳಿಗೆ ಮುನ್ನೂರು ಯೂನಿಟ್ ವಿದ್ಯುತ್ ಮಂಜೂರು ಮಾಡುವಂತೆ ಸಂಯುಕ್ತ ಹೋರಾಟ ಕರ್ನಾಟಕ ಒತ್ತಾಯಿಸಿತು.

ಕುಮಾರ್ ಸಮತಳ, ರೈತ ಮುಖಂಡ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಸತ್ಯಪ್ಪ ಮಲ್ಲಾಪುರ, ಕೆ.ಎಂ.ಕಾಂತರಾಜು, ಧನಂಜಯ ಹಂಪಯ್ಯನಮಾಳಿಗೆ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಪುರಷೋತ್ತಮ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment