ಚಿತ್ರದುರ್ಗ. ಮಾ.16: ಪ್ರಸಕ್ತ ಸಾಲಿನ ಕನಿಷ್ಟ ಬೆಂಬಲ ಬೆಲೆ ಚಿತ್ರದುರ್ಗ ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಸಭಾ ನಡವಳಿಯಂತೆ ಪ್ರತಿ ರೈತರಿಂದ ರಾಗಿ ಉತ್ಪಾದನೆ ಅನುಗುಣವಾಗಿ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ ಪ್ರತಿ ಕ್ವಿಂಟಾಲ್‍ಗೆ ರೂ.3846/- ರಂತೆ ಎಲ್ಲಾ ರೈತರಿಂದ ರಾಗಿ ಖರೀದಿಸಲಾಗುತ್ತದೆ.
ಹೊಸದುರ್ಗ ತಾಲ್ಲೂಕು ಎಪಿಎಂಸಿ ಪ್ರಾಂಗಣ–1, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಎಪಿಎಂಸಿ ಪ್ರಾಂಗಣ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 2 ರಾಗಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ರೈತರು ರಾಗಿ ನೊಂದಣಿ ಮಾಡಿಸಲು ಕೃಷಿ ಇಲಾಖೆಯಿಂದ ನೀಡಿರುವ “ರೈತರ ನೋಂದಣಿ ಮತ್ತು ಏಕೀಕೃತ ಫಲಾನುಭವಿ ವ್ಯವಸ್ಥೆ” ಫ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















