ಬೆಳಗಾವಿಯಲ್ಲಿ ಎಂ.ಇ.ಎಸ್. ಪುಂಡರ ಅಟ್ಟಹಾಸ ಮಟ್ಟಹಾಕಿ : ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಒತ್ತಾಯ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.18 : ಬೆಳಗಾವಿಯಲ್ಲಿ ಎಂ.ಇ.ಎಸ್. ಪುಂಡರು ಕನ್ನಡಪರ ಹೋರಾಟಗಾರರಾದ ಅನಿಲ್ ದಡ್ಡಮನಿ, ಸಂಪತ್‍ಕುಮಾರ್ ಇವರುಗಳಿಗೆ ಕೊಲೆ ಬೆದರಿಕೆ ಹಾಕಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಹಾರಾಷ್ಟ್ರದ ಗಡಿಭಾಗದಲ್ಲಿರುವ ಬೆಳಗಾವಿಯಲ್ಲಿ ಮರಾಠಿ ಎಂ.ಇ.ಎಸ್.ನವರು ಕನ್ನಡಪರ ಹೋರಾಟಗಾರರನ್ನು ಪದೆ ಪದೆ ಅವಮಾನಿಸುತ್ತಿರುವುದನ್ನು ಸಹಿಸಲಾಗುವುದಿಲ್ಲ. ಅನಿಲ್‍ದಡ್ಡಮನಿ, ಸಂಪತ್‍ಕುಮಾರ್ ಇವರುಗಳಿಗೆ ಇನ್‍ಸ್ಟಾಗ್ರಾಂನಲ್ಲಿ ಕೊಲೆ ಬೆದರಿಕೆ ಹಾಕಿರುವವರನ್ನು ಕೂಡಲೆ ಬಂಧಿಸಿ ಎಂ.ಇ.ಎಸ್.ನ್ನು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕರುನಾಡ ವಿಜಯಸೇನೆಯಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಕಾಂಗ್ರೆಸ್, ಬಿಜೆಪಿ. ಜೆಡಿಎಸ್. ಮೂರು ಪಕ್ಷಗಳು ಮರಾಠಿಗರ ಮತಕ್ಕಾಗಿ ಕನ್ನಡಕ್ಕೆ ಎಷ್ಟೆ ಅವಮಾನವಾದರೂ ನೋಡಿಕೊಂಡು ಸುಮ್ಮನಿರುವುದು ಯಾವ ನ್ಯಾಯ?
ಕನ್ನಡ ನಾಡಿನ ಹಿತದೃಷ್ಟಿಯಿಂದ ಎಂ.ಇ.ಎಸ್. ಪುಂಡಾಟಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮೂರು ಪಕ್ಷಗಳಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್ ಸಿ. ಉಪಾಧ್ಯಕ್ಷೆ ರತ್ನಮ್ಮ, ಯುವ ಘಟಕದ ಅಧ್ಯಕ್ಷ ನಾಗರಾಜ್ ಮುತ್ತು, ನಗರಾಧ್ಯಕ್ಷ ಅವಿನಾಶ್, ಮಹಮದ್ ರಫಿ, ಶಾನ್, ಸುರೇಶ್, ಅಖಿಲೇಶ್, ಹರೀಶ್, ಪ್ರದೀಪ್, ರಾಜಣ್ಣ, ಮಣಿಕಂಠ ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *