ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ಸಮರ ಸಾರಿದೆ. ಈ ವೇಳೆ ಸಾಕಷ್ಟು ಪ್ರದೇಶಗಳನ್ನು ವಶಪಡಿಸಿಕೊಂಡಿದೆ. ಇಂದು ಕೂಡ ರಷ್ಯಾದ ಪ್ರಮುಖ ನಗರದ ಮೇಲೆ ಗ್ಯಾಸ್ ಪೈಪ್ ಲೈನ್ ಸ್ಪೋಟ ಮಾಡಿದೆ. ಈ ಬೆನ್ನಲ್ಲೆ ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟೀನ್ ತನ್ನ ಸಶಸ್ತ್ರ ಪಡೆಗೆ ಧನ್ಯವಾದ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ರಷ್ಯಾ ಒಕ್ಕೂಟದ ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಮತ್ತು ಅವರ ನಿಶ್ಕಲ್ಮಶ ಸೇವೆಗೆ ಧನ್ಯವಾದ ಎಂದಿದ್ದಾರೆ. ವಿಶೇಷ ಕಾರ್ಯಾಚರಣೆ ಪಡೆಗಳ ಕಮಾಂಡ್, ಸಿಬ್ಬಂದಿಗೆ, ರಷ್ಯಾದ ಜನತೆ ಮತ್ತು ನಮ್ಮ ಮಹಾನ್ ಮಾತೃಭೂಮಿಗೆ ಅವರು ಮಾಡಿದ ನಿಷ್ಕಲ್ಮಷ ಸೇವೆಗಾಗಿ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಉಕ್ರೇನ್ ಜನ ಭೀತಿಯಲ್ಲೇ ಬದುಕುತ್ತಿದ್ದಾರೆ. ಈಗಾಗಲೇ ಸಾಕಷ್ಟು ಪ್ರದೇಶಗಳು ಹಾಗೂ ವಿಮಾನ ನಿಲ್ದಾಣಗಳನ್ನ ರಷ್ಯಾ ವಶಪಡಿಸಿಕೊಂಡಿದೆ. ಈ ಸಂಬಂಧ ರಷ್ಯಾ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.