ಚರ್ಚ್ ಗೆ ಬಂದವರ ಬಳಿ ಮತಾಂತರದ ಪ್ರಶ್ನೆ : ಶಾಸಕರ ವಿಡಿಯೋ ವೈರಲ್..!

1 Min Read

ಚಿತ್ರದುರ್ಗ: ರಾಜ್ಯದಲ್ಲಿ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಆಸೆ ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಈಗಾಗಲೇ ಮತಾಂತರ ನಿಷೇಧ ಕಾಯ್ದೆಯನ್ನ ಇನ್ನಷ್ಟು ಬಲಗೊಳಿಸಲು ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಮತಾಂತರವಾಗಿದ್ದಾರಾ ಎಂಬ ಪ್ರಶ್ನೆ ಕೇಳಿರುವ ವಿಡಿಯೋವೊಂದು ಹರಿದಾಡುತ್ತಿದೆ.

ಇನ್ನು ಕೆಲವೇ ದಿನಗಳಲ್ಲಿ ಜ್ರಿಸ್ಮಸ್ ಹಬ್ಬ ಇದೆ. ಈ ಹಿನ್ನೆಲೆ ಜಿಲ್ಲೆಯ ಹೊಸದುರ್ಗ ಪಟ್ಟಣದ ಶಾಂತಿನಗರದ ಚರ್ಚ್ ಗೆ ಜನ ಸಾಕಷ್ಟು ಸಂಖ್ಯೆಯಲ್ಲಿ ಹರಿದು ಬಂದಿದ್ದಾರೆ. ಇವರನ್ನ ನಿಲ್ಲಿಸಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಭಾನುವಾರದ ಹಿನ್ನೆಲೆ ಚರ್ಚ್ ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ವೇಳೆ ಪ್ರಾರ್ಥನೆ ಮುಗಿಸಿ ಬಂದವರನ್ನು ಶಾಸಕ ಗೂಳಿಹಟ್ಟಿ ಶೇಖರ್ ಅವರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಯಾವ ಊರು, ಯಾವ ಸಮುದಾಯ ಎಂದು ಪ್ರಶ್ನಿಸಿದ್ದಾರೆ. ಮತಾಂತರ ಆಗಿದ್ದೀರಾ, ಎಷ್ಟು ವರ್ಷದಿಂದ ಮತಾಂತರ ಎಂದು ಪ್ರಶ್ನೆ ಮಾಡಿದ್ದಾರೆ.

ಹಲವು ವರ್ಷಗಳಿಂದ ಚರ್ಚ್ ಗೆ ಬರುತ್ತಿದ್ದೇವೆ, ಮತಾಂತರ ಆಗಿದ್ದೇವೆ. ಚರ್ಚ್ ಗೆ ಬಂದಿದ್ದಕ್ಕೆ ಆರೋಗ್ಯ ಸುಧಾರಿಸಿದೆ ಎಂದು ಕೆಲವರು ಉತ್ತರಿಸಿದ್ದಾರೆ. ರಾಜ್ಯದಲ್ಲಿ ಮತಾಂತರ ಹೆಚ್ಚಾಗುತ್ತಿರುವ ಹಿನ್ನೆಲೆ ಶಾಸಕ ಗೂಳಿಹಟ್ಟಿ ಶೇಖರ್ ಕಾರಲ್ಲಿ ಹೋಗುವಾಗ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *