Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೆಂಬರ್ 24 ರಂದು ಸಿ.ಎನ್.ಸಿ ಪಿಯು ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಮತ್ತು ನೀಲ ನಕ್ಷೆ ತಯಾರಿಸುವ ಕಾರ್ಯಾಗಾರ : ಪ್ರಾಂಶುಪಾಲರಾದ ನಾಗರಾಜು ಮಾಹಿತಿ

---Advertisement---

ಸುದ್ದಿಒನ್, ಚಿತ್ರದುರ್ಗ ನ. 23 : ಇತಿಹಾಸ ವೇದಿಕೆ ಮತ್ತು ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಇದರ ಸಂಯುಕ್ತಾಶ್ರಯದಲ್ಲಿ ಪ್ರಶ್ನೆ ಪತ್ರಿಕೆ ಮತ್ತು ನೀಲ ನಕ್ಷೆ ತಯಾರಿಸುವ ಕಾರ್ಯಾಗಾರವೂ ನವೆಂಬರ್  24 ರ ಶುಕ್ರವಾರ ನಗರದ ಸಿ.ಎನ್.ಸಿ.(ಚಿನ್ಮೂಲಾದ್ರಿ) ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿ.ಎನ್.ಸಿ.(ಚಿನ್ಮೂಲಾದ್ರಿ) ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜು ತಿಳಿಸಿದ್ದಾರೆ.

ಕಾರ್ಯಗಾರವನ್ನು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪ ನಿರ್ದೇಶಕರಾದ ಪುಟ್ಟಸ್ವಾಮಿ ಆರ್ ಉದ್ಘಾಟಿಸಲಿದ್ದಾರೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ರಂಗಪ್ಪ ಎಲ್, ಕಾರ್ಯದರ್ಶಿ ನಾಗರಾಜ್ ಕೆ. ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ ಬಿ.ಆರ್. ಇತಿಹಾಸ ವೇದಿಕೆಯ ಗೌರವಾಧ್ಯಕ್ಷರಾದ ದೇವೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಆರ್. ಮುಸ್ತಪ, ಕಾರ್ಯಾದ್ಯಕ್ಷರಾದ ಎಂ.ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇತಿಹಾಸ ವೇದಿಕೆಯ ಅಧ್ಯಕ್ಷರಾದ ಜಿ.ಎಸ್.ತಿಪ್ಪೇಸ್ವಾಮಿ ವಹಿಸಲಿದ್ದಾರೆ.
ತುಮಕೂರಿನ ಶಿರಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ತಿಮ್ಮರಾಜು ಪ್ರಶ್ನೆ ಪತ್ರಿಕೆ ಮತ್ತು ನೀಲನಕ್ಷೆ ತಯಾರಿಕೆಯ ಬಗ್ಗೆ ತಿಳಿಸಿ ಕೊಡಲಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment