ಚಿತ್ರದುರ್ಗ : ಮೇ 9 : ಜಾತಿ ಪ್ರಮಾಣ ಪತ್ರ ಇಲ್ಲದೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಆದಕಾರಣ ಜಾತಿ ಪ್ರಮಾಣ ಪತ್ರಗಳನ್ನ ತ್ವರಿತವಾಗಿ ವಿತರಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹಾರೋಗೆರೆ ಮಹೇಶ್ ಅಧಿಕಾರಿಗಳಿಗೆ ಸಲಹೆ ನೀಡಿದರು..
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ ವೆಂಕಟೇಶ್ ಇವರೊಂದಿಗೆ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕಂದಾಯ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, ಕಾಡುಗೊಲ್ಲ ಸಮುದಾಯವು ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯವಾಗಿದ್ದು. ಈ ಸಮುದಾಯಕ್ಕೆ ಸರ್ಕಾರದ ಸವಲತ್ತುಗಳು ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ ಅವರಿಗೆ ಅಷ್ಟು ಜ್ಞಾನವಿಲ್ಲ ಸರ್ಕಾರ ಇದನ್ನ ಅರಿತು ಕಾಡುಗೊಲ್ಲ ಸಮುದಾಯಕ್ಕೆಂದೇ ಪ್ರತ್ಯೇಕ ನಿಗಮ ಮಂಡಳಿ ಮಾಡಿದೆ. ಈ ನಿಗಮದ ಮೂಲಕ ವಿವಿಧ ಯೋಜನೆಗಳನ್ನ ಜಾರಿಗೊಳಿಸಲಾಗುತ್ತದೆ ಆದರೆ ಈ ಸಮುದಾಯಕ್ಕೆ ಅಭಿವೃದ್ಧಿ ನಿಗಮದಿಂದ ಸಿಗುವ ಯೋಜನೆಗಳನ್ನ ತಲುಪಿಸಲು ಜಾತಿ ಪ್ರಮಾಣ ಪತ್ರ ಮುಖ್ಯವಾಗಿದ್ದು ಇದು ಇಲ್ಲದೆ ಅದೇಷ್ಟೊ ಜನರಿಗೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಆದಕಾರಣ ತಾಲೂಕು ಮಟ್ಟದ ಕಂದಾಯ ಅಧಿಕಾರಿಗಳು ತಹಶೀಲ್ದಾರ್ ಅವರುಗಳ ಗಮನಹರಿಸಿ ಶೀಘ್ರ ಜಾತಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿ ನಿಗಮದ ಅನುಕೂಲಗಳನ್ನು ಪಡೆಯುವಂತೆ ಅವಕಾಶ ಮಾಡಿಕೊಡಬೇಕು, ಚಿತ್ರದುರ್ಗ ಹಾಗೂ ತುಮಕೂರು ಈ ಭಾಗದಲ್ಲಿ ಅತಿ ಹೆಚ್ಚು ಕಾಡುಗೊಲ್ಲ ಬುಡಕಟ್ಟು ಸಮುದಾಯಗಳಿದ್ದು. ಈ ಸಮುದಾಯಕ್ಕೆ ಸರಿಯಾದ ಮಾಹಿತಿ ಇಲ್ಲದೆ ಇರುವುದರಿಂದ ಹಾಗೂ ಜಾತಿ ಪ್ರಮಾಣ ಪತ್ರ ವಿಳಂಬದಿಂದ ಯೋಜನೆಗಳಿಗೆ ಅರ್ಜಿ ಹಾಕಲು ಅವಕಾಶವಾಗುತ್ತಿಲ್ಲ ಆದ್ದರಿಂದ ಅಧಿಕಾರಿಗಳು ಇತ್ತ ಗಮನಹರಿಸಿಬೇಕು ಸರ್ಕಾರವು ಸಹ ಈಗಾಗಲೇ ಸುತ್ತಲೇ ಹೊಡೆಸಿದೆ ಇದಕ್ಕೆ ತಹಶೀಲ್ದಾರ್ ಹೆಚ್ಚು ಬಲ ನೀಡಬೇಕು,ನಿಗಮ ಮಂಡಳಿಯಿಂದ ಸಿಗುವಂತಹ ಗಂಗಾ ಕಲ್ಯಾಣಿ ,ನೇರ ಸಾಲ ಯೋಜನೆ, ಸಾರಥಿ ಯೋಜನೆ ಅಡಿಯಲ್ಲಿ ವಾಹನ ಸೌಲಭ್ಯ ಅರಿವು ಶೈಕ್ಷಣಿಕ ಯೋಜನೆ ,ವಿದೇಶಿ ವ್ಯಾಸಂಗಕ್ಕೆ ಸಾಲ, ಹುಲಿಗೆ ಯಂತ್ರ ಹೀಗೆ ಹಲವು ರೀತಿಯ ಸಾಲ ಯೋಜನೆಗಳಿದ್ದು ಕಾಡುಗೊಲ್ಲ ಜನಾಂಗದವರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ ಎಲ್ಲಾ ತಾಲೂಕು ತಹಶೀಲ್ದಾರ್ ಜಾತಿ ಪ್ರಮಾಣ ಪತ್ರ ವಿತರಿಸಲು ಗಮನಹರಿಸಬೇಕು,ಜಾತಿ ಪ್ರಮಾಣ ಪತ್ರ ಇಲ್ಲದೆ ಫಲಾನುಭವಿಗಳಿಗೆ ಹಲವು ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ, ಸರ್ಕಾರದ ಯೋಜನೆಗಳನ್ನ ಜನರಿಗೆ ತಲುಪಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಬೇಕು ತಳಸಮುದಾಯಗಳ ಜನ ಮೇಲೆ ಬರಬೇಕು ಕಾಡುಗೊಲ್ಲ ಸಮುದಾಯಕ್ಕೆ ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಇದ್ದರು…

















