Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬ್ರಿಟಿಷರ ಬೂಟು ನೆಕ್ಕುತ್ತಾರೆ ಹೇಳಿಕೆಗೆ ಆರ್ ಅಶೋಕ್ ಗರಂ : ಬಿಕೆ ಹರಿಪ್ರಸಾದ್ ಗೆ ತಿರುಗೇಟು..!

---Advertisement---

ಬೆಂಗಳೂರು: ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಮೇಲೆ ಕಿಡಿಕಾರಿದ್ದಾರೆ. ಇದರ ಜೊತೆಗೆ ಬಿಕೆ ಹರಿಪ್ರಸಾದ್ ಅವರು ಹೇಳಿದ್ದ ಬ್ರಿಟಿಷರ ಬೂಟು ನೆಕ್ಕಿದ್ದವರು ಎಂಬ ಜೇಳಿಕೆಗೂ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಪೂರಕವಾಗಿ ನಿಲ್ಲುತ್ತಿಲ್ಲ. ಯಾವ ಯೋಜನೆಗೂ ಅಡಿಗಲ್ಲು ಹಾಕದೆ, ಕೇವಲ ಜನರ ಎದೆ ಮೇಲೆ ಕಲ್ಲು ಹಾಕುತ್ತಿದ್ದಾರೆ ಎಂದಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಅವರು ಜಾತಿ – ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರನಾಗಿದ್ದಾರೆ. ಬರ ಪರಿಹಾರಕ್ಕೆ ಇದೇ ವಾರದಲ್ಲಿ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೂ ಹಣ ಸಿಕ್ಕಿಲ್ಲ. ಸರ್ಕಾರದ ಶೌಚಾಲಯ ಸ್ವಚ್ಛಗೊಳಿಸುವುದಕ್ಕೂ ಹಣ ಇಲ್ಲ. ಸರ್ಕಾರದಿಂದ ಕೊಡುವ 15-20 ಸಾವಿರ ಹಣಕ್ಕೆ ಕೆಲಸ ಮಾಡಲು ಯಾರು ಬರದ ಕಾರಣ, ಅಲ್ಲಿನ ಮಕ್ಕಳನ್ನೇ ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಲಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ‌.

ಇದೆ ವೇಳೆ ಬಿಕೆ ಹರಿಪ್ರಸಾದ್ ನೀಡಿದ ಬ್ರಿಟಿಷರ ಬೂಟು ನೆಕ್ಕುತ್ತಿದ್ದರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹತಾಶರಾಗಿ ಈ ರೀತಿ ಮಾತನಾಡುತ್ತಿದ್ದಾರೆ.ಅವರ ಹೇಳಿಕೆ, ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಸಮೀಕ್ಷೆಗಳ ಪ್ರಕಾರ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ. ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಬದಲು, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮಾಡಿ ಎಂದು ಒಕ್ಕೂಟದ ಸದಸ್ಯರು ಬಯಸಿದ್ದಾರೆ. ಈ ಎಲ್ಲಾ ವಿಷಯಗಳಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು, ಬೇರೆ ವಿಷಯದ ಬಗ್ಗೆ ಮಾತನಾಡಲು ಶುರು ಮಾಡಿದ್ದಾರೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment