Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೂನ್ 18 ರಂದು ಘಟಪರ್ತಿ ಗ್ರಾಮದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ : ತಹಶೀಲ್ದಾರ್ ಎನ್. ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ, .(ಮೇ25) : ತಾಲೂಕಿನ ಘಟಪರ್ತಿ ಗ್ರಾಮದಲ್ಲಿ ಜೂನ್ 18 ರಂದು ಕಂದಾಯ ಸಚಿವರು ಗ್ರಾಮ ವಾಸ್ತವ್ಯ ಮಾಡಲಿದ್ದು,  ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು.

ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಅಧಿಕಾರಿಗಳನ್ನೊಳಗೊಂಡ ಸಭೆಯಲ್ಲಿ ಮಾತನಾಡಿದ ಅವರು, ಸಾರಿಗೆ ಸಚಿವರ ಆಶಯದಂತೆ ಕಂದಾಯ ಮಂತ್ರಿಗಳು ಘಟಪರ್ತಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದು,  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 5 ಗ್ರಾಮಗಳು ಕೂಡ ಸಮಸ್ಯೆ ಮುಕ್ತ ಗ್ರಾಮಗಳಾಗಬೇಕು.

ಈ ಗ್ರಾಮಗಳಲ್ಲಿನ ಸಾರ್ವಜನಿಕರ ಅದರಲ್ಲೂ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಾದ ಪೌತಿ ಖಾತೆ, ದರಕಾಸ್ತು, ಜಮೀನಿನ ಪೋಡಿ ಕಾರ್ಯ, ಸಾರ್ವಜನಿಕರಿಗೆ ಪಿಂಚಣಿ ನೀಡುವುದು, ಸ್ಮಶಾನಗಳ ಸಮಸ್ಯೆ, ಸರ್ಕಾರಿ ಜಮೀನು ಒತ್ತುವರಿ, ತೆರವು, ಸಾರ್ವಜನಿಕರಿಗೆ ದಾರಿ ನೀಡುವ ವ್ಯವಸ್ಥೆ , ವಿವಿಧ ಉದ್ದೇಶಗಳಿಗೆ ಗ್ರಾಮ ಪಂಚಾಯತಿಗಳಿಗೆ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಹಸ್ತಾಂತರಿಸುವ ಕಾರ್ಯ, ರೈತರಿಗೆ ಬೆಳೆ ಪರಿಹಾರ ನೀಡುವ ಕಾರ್ಯ, ಸೇರಿದಂತೆ ಗ್ರಾಮದಲ್ಲಿನ ನೈರ್ಮಲೀಕರಣ, ಕುಡಿಯುವ ನೀರಿನ ವ್ಯವಸ್ಥೆ ಎಲ್ಲವೂ ಸರಿಯಾಗಬೇಕು.

ಇವುಗಳಲ್ಲಿ ಯಾವುದೇ ಸಮಸ್ಯೆ ಗ್ರಾಮಸ್ಥರಲ್ಲಿ ಇರಕೂಡದು ಈ ಬಗ್ಗೆ ಕಂದಾಯ ಇಲಾಖೆ ಸಿಬ್ಬಂದಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಮನೆ ಮನೆ ಸಂಪರ್ಕಿಸಿ ಎಲ್ಲಾ ಫಲಾನುಭವಿಗಳನ್ನು ಗುರುತಿಸಿ ಮೇಲ್ಕಂಡ ಎಲ್ಲಾ ಕಾರ್ಯಗಳನ್ನು ಶೇಕಡ ನೂರರಷ್ಟು ಪೂರ್ಣಗೊಳಿಸಿ ವಾರದೊಳಗೆ ವರದಿ ನೀಡುವಂತೆ ಸೂಚಿಸಿದರು.

ಪಂಚಾಯಿತಿ ವ್ಯವಸ್ಥೆಯಲ್ಲಿ ಚುನಾಯಿತ ಪ್ರತಿನಿಧಿಗಳು ಅಭಿವೃದ್ಧಿ ಅಧಿಕಾರಿಗಳು ಮತ್ತು ನಿರ್ಮಲೀಕರಣ ಸಿಬ್ಬಂದಿಗಳು ಗ್ರಾಮಗಳಲ್ಲಿನ ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಿ ಜನಗಳ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಎಲ್ಲಾ ಏರ್ಪಾಡು ಮಾಡಿಕೊಳ್ಳುವಂತೆ ಸೂಚಿಸಿದ್ದು ಯಾವುದೇ ವ್ಯತ್ಯಯವಾಗ ಕೂಡದೆಂದು ನಿರ್ದೇಶನ ನೀಡಿದ್ದಾರೆ. ಅದರಂತೆ ಎಲ್ಲಾ ಅಧಿಕಾರಿ ನೌಕರರು ಚುನಾಯಿತ ಪ್ರತಿನಿಧಿಗಳು ಸಚಿವರ ವಾಸ್ತವ್ಯಕ್ಕೆ ಒಂದು ನಿರ್ದಿಷ್ಟ ಕಾರ್ಯಸೂಚಿಯನ್ನು ತಯಾರಿಸಿದ್ದು ಅದಕ್ಕೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಆರಂಭದಲ್ಲಿ ಸಚಿವರನ್ನು ಜಾನಪದ ಶೈಲಿಯ ಬಂಡಿ ಗಾಡಿಯಲ್ಲಿ ರೈತರೊಂದಿಗೆ ಆಹ್ವಾನಿಸಿ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡು ಗ್ರಾಮದ ಯುವಕ ಯುವತಿಯರು ಮತ್ತು ವಿದ್ಯಾರ್ಥಿಗಳೊಂದಿಗೆ ಗ್ರಾಮಸ್ವರಾಜ್ಯದ ಪರಿಕಲ್ಪನೆಯ ಸಂವಹನ ಕಾರ್ಯಕ್ರಮ ಸಭಾ ಕಾರ್ಯಕ್ರಮ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹೀಗೆ ಹತ್ತು ಬಗೆಯ ದಿನವಿಡೀ ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳುತ್ತಿದ್ದು, ಜಿಲ್ಲಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು,  ಚುನಾಯಿತ ಪ್ರತಿನಿಧಿಗಳು ಭಾಗವಹಿಸುತ್ತಿದ್ದು ಯಾವುದೇ ವ್ಯತ್ಯಯ ಕಾರ್ಯಕ್ರಮದಲ್ಲಿ ತಲೆದೋರದಂತೆ ಕಟ್ಟೆಚ್ಚರವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಸಚಿವರ ಕಾರ್ಯಕ್ರಮಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಘಟಪರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಮಾದೇವಿ ತಿಮ್ಮಾರೆಡ್ಡಿ, ಉಪಾಧ್ಯಕ್ಷರಾದ ಸೇವಾ ನಾಯಕ್, ಸದಸ್ಯರಾದಂತಹ ಘಟಪರ್ತಿ ರವಿ, ನಿರಂಜನ ಗೌಡ, ಮಂಜುನಾಥ, ಪುಟ್ಟಮ್ಮ, ರಾಮಣ್ಣ , ರಾಜಸ್ವನಿರೀಕ್ಷಕರ ರಫೀಕ ಅಹಮದ್ ಮುಂತಾದವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!