Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ಯಾರಾ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದ ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಪ್ರತಿಭೆ ರಾಧಾ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಫೆ.28) : ಯುಎಇ ಯ ಶಾರ್ಜಾದಲ್ಲಿ ಈಚೆಗೆ ನಡೆದ ಅಂತರರಾಷ್ಟ್ರೀಯ ಮುಕ್ತ ಪ್ಯಾರಾ ಅಥ್ಲೆಟಿಕ್ ಕೂಟದ ವಿವಿಧ ವಿಭಾಗಗಳ 1500 ಮೀಟರ್ಸ್ ಓಟದ ಸ್ಪರ್ಧೆಯಲ್ಲಿ ರಾಧಾ ವೆಂಕಟೇಶ್ ಚಿನ್ನದ ಪದಕ ಹಾಗೂ ರಕ್ಷಿತಾ ರಾಜು ಬೆಳ್ಳಿ ಪದಕ ಪಡೆದಿದ್ದಾರೆ.

ಟಾರ್ಗೆಟ್ ಒಲಿಂಪಿಕ್ ಪೋಡಿಯಂ (ಟಾಪ್) ಯೋಜನೆಯಡಿ  ಬೆಂಗಳೂರಿನ ಸಾಯಿ ಕ್ರೀಡಾ ನಿಲಯದಲ್ಲಿ ಅಭ್ಯಾಸ ಮಾಡುತ್ತಿರುವ ರಾಧಾ ವೆಂಕಟೇಶ್ ಟಿ12 ವಿಭಾಗದ 1500 ಮೀಟರ್ಸ್ ಓಟದಲ್ಲಿ 5:16.77 ನಿಮಿಷದಲ್ಲಿ ಹಾಗೂ ಟಿ11 ವಿಭಾಗದ 1500 ಮೀಟರ್ಸ್ ಓಟದಲ್ಲಿ ರಕ್ಷಿತಾ ರಾಜು 5:44.67 ನಿಮಿಷದಲ್ಲಿ ಗುರಿ ತಲುಪಿದ್ದಾರೆ.

ಅಕ್ಟೋಬರ್‌ನಲ್ಲಿ ಚೀನಾದಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್ ಗೇಮ್ಸ್ ಗೆ ಆಯ್ಕೆಯಾಗಿದ್ದಾರೆ.  ಇವರು ಎನ್‍ಸಿಒಇ ಯೋಜನೆಯಡಿ ಅಭ್ಯಾಸ ಮಾಡುತ್ತಿದ್ದಾರೆ.

ರಾಧಾ ವೆಂಕಟೇಶ್ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೊಮ್ಮಸಮುದ್ರ ಗ್ರಾಮದವರು.

ರಕ್ಷಿತಾ ರಾಜು ಅವರು ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಗುಡ್ನಹಳ್ಳಿ ಗ್ರಾಮದವರಾಗಿದ್ದಾರೆ.  ಇಬ್ಬರೂ ಕೋಚ್ ರಾಹುಲ್ ಬಾಲಕೃಷ್ಣ, ಗೋವಿಂದ್, ಸೌಮ್ಯಾ ಸಾವಂತ್, ಗೈಡ್ ರನ್ನರ್ ತಬರೇಶ್ ಅವರ ಸಲಹೆ ಪಡೆದು ಸಾಧನೆ ಮಾಡುತ್ತಿದ್ದಾರೆ.

ಕಳೆದ ಬಾರಿ ನವದೆಹಲಿಯಲ್ಲಿ ನಡೆದ 400ಮೀ, 800ಮೀ ಹಾಗೂ 1500ಮೀ ಓಟದಲ್ಲಿ ಚಿನ್ನ ಗೆದ್ದುಕೊಂಡಿದ್ದರು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!