Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂವಿಧಾನದ ಪುಸ್ತಕ ಹಿಡಿದು ರಾಹುಲ್ ಗಾಂಧಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ: ಎಂಎಲ್‌ಸಿ ಕೆ.ಎಸ್. ನವೀನ್ ಕಿಡಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್.26 : ರಾಹುಲ್ ಗಾಂಧಿ ಸಂವಿಧಾನದ ಪುಸ್ತಕವನ್ನು ಬಗಲಲ್ಲೇ ಹಿಡಿದುಕೊಂಡು ತಿರುಗಾಡುತ್ತಾ ದೇಶದ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಆಪಾದಿಸಿದರು.

ಸಂವಿಧಾನ ದಿನಾಚರಣೆ ಪ್ರಯುಕ್ತ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಬುಧವಾದ ಮಾಲಾರ್ಪಣೆ ಸಲ್ಲಿಸಿ ಮಾತನಾಡುತ್ತಾ, ಪಾರ್ಲಿಮೆಂಟ್‍ನಲ್ಲಿ ಮಂಡನೆಯಾದ ಮೇಲೆ 2015 ರಿಂದಲೂ ಪ್ರತಿ ವರ್ಷವು ಸಂವಿಧಾನ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ನಮ್ಮದು. ಬದುಕಿನ ಪ್ರತಿ ದಿನವೂ ಸಂವಿಧಾನವನ್ನು ಗೌರವಿಸಬೇಕು ಎಂದು ಹೇಳಿದರು.

ನೆಪಮಾತ್ರಕ್ಕೆ ಸಂವಿಧಾನವನ್ನು ಆಚರಿಸುತ್ತಿರುವ ಕಾಂಗ್ರೆಸ್ ಪಕ್ಷ ಅಂಬೇಡ್ಕರ್‍ಗೆ ಅವಮಾನ ಮಾಡಿದೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ 1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದು ಸಂವಿಧಾನಕ್ಕೆ ಮಾರಕ. ಶೋಷಿತರು, ದಮನಿತರು ದಲಿತರಿಗೆ ಬಿಜೆಪಿ ನ್ಯಾಯ ಕೊಟ್ಟಿದೆ ಹಾಗಾಗಿ ಸಂವಿಧಾನದ ಆಶಯ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ ಎಂದರು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನವನ್ನು ರಚಿಸುವಾಗ ಅನೇಕ ಸವಾಲುಗಳನ್ನು ಹೆದರಿಸಬೇಕಾಯಿತು. ಕೇಂದ್ರ ಸರ್ಕಾರ ಸಂವಿಧಾನವನ್ನು ಬದಲಾವಣೆ ಮಾಡುತ್ತದೆ ಎಂದು ಕಾಂಗ್ರೆಸ್‍ನವರು ಅಪ ಪ್ರಚಾರ ಮಾಡುತ್ತಿದ್ದಾರೆ. ದಲಿತರು ಯಾರು ಇದನ್ನು ನಂಬಬೇಡಿ ಎಂದು ಮನವಿ ಮಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಮಾತನಾಡಿ, 2015 ರಿಂದಲೂ ಪ್ರತಿವರ್ಷವೂ ಸಂವಿಧಾನ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಕಾಂಗ್ರೆಸ್ ಇತ್ತೀಚೆಗೆ ಸಂವಿಧಾನದ ಪುಸ್ತಕ ಹಿಡಿಯುವುದನ್ನು ಕಲಿಸಿದೆ. ಅಂಬೇಡ್ಕರ್ ಬದುಕಿದ್ದಾಗಲೂ ಸತ್ತ ಮೇಲು ಕಾಂಗ್ರೆಸ್ ಅವಮಾನಿಸಿದೆ. ಚುನಾವಣೆಯಲ್ಲಿ ಅಂಬೇಡ್ಕರ್ ಸೋಲಲು ಕಾಂಗ್ರೆಸ್ ಕಾರಣ. ರಾಷ್ಟ್ರೀಯ ಕಾನೂನು ಸೇವಾ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಓಂಕಾರ್, ಜಿಲ್ಲಾಧ್ಯಕ್ಷ ಪರಶುರಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಉಪಾಧ್ಯಕ್ಷ ಡಾ. ಸಿದ್ಧಾರ್ಥ ಗುಂಡಾರ್ಪಿ , ಶೈಲೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ಎಸ್ಸಿ ಮೋರ್ಚಾ ಕಾರ್ಯದರ್ಶಿ ಪ್ರದೀಪ್‍ಕುಮಾರ್, ಪ್ರಧಾನ ಕಾರ್ಯದರ್ಶಿ ಚೇತನ್,ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ಲೀಲಾವತಿ, ಎಸ್ಸಿ ಮೋರ್ಚಾ ಉಪಾಧ್ಯಕ್ಷ ದಯಾನಂದ್, ಮಾಜಿ ನಗರಸಭೆ ಸದಸ್ಯ ಶ್ರೀನಿವಾಸ್, ಬಸಮ್ಮ, ರೇಖ, ರಜನಿ, ಮಂಜುಳಮ್ಮ, ಚಂದ್ರಶೇಖರ್, ಪ್ರಹ್ಲಾದ್,ಕಿರಣ್, ಯಶವಂತಕುಮಾರ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಅಂಬೇಡ್ಕರ್ ಪ್ರತಿಮೆ ಮತ್ತು ಸಂವಿಧಾನದ ಪುಸ್ತಕವನ್ನು ರಥದಲ್ಲಿಟ್ಟು ನಗರದ ಆನೆಬಾಗಿಲಿನಿಂದ ಮೆರವಣಿಗೆಯ ಮೂಲಕ ಅಂಬೇಡ್ಕರ್ ವೃತ್ತಕ್ಕೆ ತರಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now